Advertisement
ಶನಿವಾರ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತ್ತೈ ಮಾಸಿಕ (ಕೆಡಿಪಿ) ಸಭೆ ಹಾಗೂ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ತಾಲೂಕಿನಲ್ಲಿ ಈಗಾಗಲೇ ಮುಳವಾಡ, ಚಿಮ್ಮಲಗಿ ಸೇರಿದಂತೆ ಅನೇಕ ಏತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಂಡಿದ್ದು. ತಾಲೂಕಿನಲ್ಲಿ ಈಗಾಗಲೇ 11 ಕೆರೆಗಳಿಗೆ ನೀರು ತುಂಬಲಾಗಿದೆ. ಇನ್ನೂ ಅನೇಕ ಕೆರೆಗಳಿಗೆ ನೀರು ತುಂಬಬೇಕು ಎಂಬ ಬೇಡಿಕೆ ಇದೆ. ಆದ್ದರಿಂದ ಕೆಲವು ಕಾಲುವೆಗಳಲ್ಲಿ ತಾಂತ್ರಿಕ ತೊಂದರೆಯನ್ನು ಅಧಿಕಾರಿಗಳು ತಕ್ಷಣ ಪರಿಹರಿಸಿ ಕೆರೆಗಳಿಗೆ ನೀರು ತುಂಬಲು ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಸವನಬಾಗೇವಾಡಿ ಮತ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಹಳ್ಳಿಗಳಲ್ಲಿ ಹೈಟೆಕ್ ಸುಲಭ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಮತ್ತೆ ಈಗಾಗಲೇ 9 ಹೈಟೆಕ್ ಸುಲಭ ಶೌಚಾಲಯಗಳ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಬಯಲು ಮುಕ್ತ ಶೌಚಾಲಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.
ಈಗಾಗಲೇ ಬಸವನಬಾಗೇವಾಡಿ ಮತಕ್ಷೇತ್ರದ ಡೋಣೂರ, ಉಕ್ಕಲಿ, ಮನಗೂಳಿ, ವಂದಾಲ ಗ್ರಾಮಗಳಲ್ಲಿ ಪಶು ಚಿಕಿತ್ಸಾಲಯದ ಕಾಮಗಾರಿ ಪೂರ್ಣಗೊಂಡಿದ್ದು. ಇನ್ನೂ ಹೆಬ್ಟಾಳದಲ್ಲಿ ಭೂಮಿಪೂಜೆ ಕಾರ್ಯ ಮಾಡಬೇಕಾಗಿದೆ. ಈಗಾಗಲೇ ಮಲಘಾಣ, ಚಿಮ್ಮಲಗಿಯಲ್ಲಿ ಪಶು ಚಿಕಿತ್ಸಾಲಯ ನಿರ್ಮಾಣದ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಾಲೂಕು ಪಶು ಆಸ್ಪತ್ರೆ ವೈದ್ಯಾಧಿಕಾರಿ ಮಲ್ಲಿಕಾರ್ಜುನ ಹಂಚನಾಳ ಸಭೆಗೆ ವಿವರಿಸಿದರು.
ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಪರಿಶೀಲನೆ ಬಗ್ಗೆ ವಿವರಿಸಿದರು. ಸಭೆಯಲ್ಲಿ ತಾಪಂ ಅಧ್ಯಕ್ಷ ದೇವೇಂದ್ರ ನಾಯಕ, ತಹಶೀಲ್ದಾರ್ ಎಂ.ಎನ್. ಚೋರಗಸ್ತಿ, ತಾಪಂ ಇಒ ಎ.ಕೆ. ಚಲವಾದಿ ವೇದಿಕೆಯಲ್ಲಿದ್ದರು.