ಉದಾಹರಣೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಬಸವ ಜಯಂತಿ ಪ್ರಯುಕ್ತ ನಗರದ ರಾಮಯ್ಯ ಸರ್ಕಲ್ ಬಳಿಯ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಬಡ ಜನರಿಗೆ ದಿನಸಿ ಕಿಟ್ ವಿತರಿಸಿ, ಸುದ್ದಿಗಾರರ ಜತೆ ಅವರು ಮಾತನಾಡಿದರು. ಉಳ್ಳವರು ಇಲ್ಲದವರೊಂದಿಗೆ ಹಂಚಿಕೊಂಡು ಬದುಕುವಂಥ ಆದರ್ಶದ ಮಾರ್ಗ ಹಾಕಿಕೊಟ್ಟವರು ಅಣ್ಣ ಬಸವಣ್ಣ. ಕೋವಿಡ್ ಸಂಕಷ್ಟದಲ್ಲಿ ಜನರು, ಬಸವಣ್ಣನ ಮಾತಿನಂತೆ ದಾಸೋಹ ಕಾರ್ಯ ನಡೆಸುತ್ತಿದ್ದಾರೆ.
Advertisement
ಬಸವೇಶ್ವರರು ಸಾರಿದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು, ಇತತರಿಗೆ ಮಾದರಿಯಾಗಿದ್ದಾರೆ. ಬಸವಣ್ಣನವರ ಪ್ರೇರಣೆ ಸದಾ ಕಾಲ ಇರಲಿ ಎಂದು ಅವರು ಆಶಿಸಿದರು. ಕನ್ನಡ ನಾಡು ಸೇರಿದಂತೆ ವಿಶ್ವದ ನಾನಾ ಭಾಗಗಳಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಬಸವ ಜಯಂತಿ ಆಚರಿಸಲಾಗುತ್ತಿದೆ. ಬಸವಣ್ಣನವರು ಮನುಕುಲಕ್ಕೆ ನೀಡಿದ ಸಂದೇಶವನ್ನು ನಮ್ಮ ಜೀವನ, ಸಮಾಜ, ವ್ಯವಸ್ಥೆಯಲ್ಲಿ ಅಳವಡಿಸಿಕೊಂಡರೆ ಸಾಮಾಜಿಕ ಹಾಗೂ ಆರ್ಥಿಕ ಸಮಸ್ಯೆಗಳೇ ಇರದು. ನಮ್ಮ ಬದುಕು ಮತ್ತಷ್ಟು ಅರ್ಥಪೂರ್ಣವಾಗಿ, ಪ್ರೀತಿ, ವಿಶ್ವಾಸ, ಸುಖ, ಸಮೃದ್ಧಿಯಿಂದಕೂಡಿರುತ್ತದೆ. ತಾರತಮ್ಯ ರಹಿತವಾದ ಸಮಾಜವನ್ನು ಕಾಣಲು ಸಾಧ್ಯ ಎಂದರು ಹೇಳಿದರು.