Advertisement
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಅವರು ಮಾತನಾಡಿದರು.
Related Articles
Advertisement
ಶಿವಮೊಗ್ಗದಲ್ಲಿ ಹಳೇ ಜೈಲು ಆವರಣವನ್ನು ಅಲ್ಲಮಪ್ರಭು ಎಂದು ನಾಮಕರಣ ಮಾಡಲಾಗಿದೆ. ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಅಕ್ಕಮಹಾದೇವಿ ವಿಶ್ವವಿದ್ಯಾ ನಿಲಯ ಎಂದು ನಾಮಕರಣ ಮಾಡಲಾಗಿದೆ. ಸಮಾಜದಲ್ಲಿ ಬದಲಾವಣೆ ತರಲು ಈ ಕೆಲಸಗಳನ್ನು ಮಾಡುತ್ತಿ ದ್ದೇವೆ. ಬಸವಾದಿ ಶರಣರ ವಚನಗಳು ಎಂದೆಂದಿಗೂ ಪ್ರಸ್ತುತವಾಗಿರಲಿವೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಎಂದು ತಿಳಿಸಿದರು.
ವೈಚಾರಿಕ ಸಮಾಜ ಸ್ಥಾಪನೆನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗ ರಹಿತ, ಜಾತಿರಹಿತ, ಮೌಡ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯ
ದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು ಎಂದು ಸಿಎಂ ಹೇಳಿದರು.