Advertisement

Karnataka: ಬಸವಣ್ಣ ಇನ್ನು ಸಾಂಸ್ಕೃತಿಕ ನಾಯಕ: ಸಿದ್ದರಾಮಯ್ಯ

11:50 PM Feb 13, 2024 | Pranav MS |

ಬೆಂಗಳೂರು: ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಎಲ್ಲ ಸರಕಾರಿ ಕಚೇರಿಗಳಲ್ಲಿಯೂ ಇರುವ ಬಸವಣ್ಣನವರ ಭಾವಚಿತ್ರದ ಕೆಳಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವ ಫ‌ಲಕವನ್ನು ಫೆ. 17ರಂದು ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು ಎಂದರು.

ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ. ಅವರ ತತ್ತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನ

Advertisement

ಶಿವಮೊಗ್ಗದಲ್ಲಿ ಹಳೇ ಜೈಲು ಆವರಣವನ್ನು ಅಲ್ಲಮಪ್ರಭು ಎಂದು ನಾಮಕರಣ ಮಾಡಲಾಗಿದೆ. ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಅಕ್ಕಮಹಾದೇವಿ ವಿಶ್ವವಿದ್ಯಾ ನಿಲಯ ಎಂದು ನಾಮಕರಣ ಮಾಡಲಾಗಿದೆ. ಸಮಾಜದಲ್ಲಿ ಬದಲಾವಣೆ ತರಲು ಈ ಕೆಲಸಗಳನ್ನು ಮಾಡುತ್ತಿ ದ್ದೇವೆ. ಬಸವಾದಿ ಶರಣರ ವಚನಗಳು ಎಂದೆಂದಿಗೂ ಪ್ರಸ್ತುತವಾಗಿರಲಿವೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಎಂದು ತಿಳಿಸಿದರು.

ವೈಚಾರಿಕ ಸಮಾಜ ಸ್ಥಾಪನೆ
ನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗ ರಹಿತ, ಜಾತಿರಹಿತ, ಮೌಡ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯ
ದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next