Advertisement

ವಚನ ಸಾಹಿತ್ಯದ ಪ್ರತೀಕವೇ ಬಸವಣ್ಣ

12:52 PM May 19, 2018 | Team Udayavani |

ಬನ್ನೂರು: ಮನುಕುಲದಲ್ಲಿ ಹುಟ್ಟಿದವರೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ಮಾತ್ರ ತಿಳಿಸಬೇಕು ಎಂದು ವಚನ ಸಾಹಿತ್ಯದ ಮೂಲಕ ಜಗತ್ತಿನ ಕಣ್ಣು ತೆರೆಸಿದ ಮಹಾ ಜ್ಞಾನಿ ಬಸವಣ್ಣ ಎಂದು ಸಮಾಜ ಸೇವಕ ಮಹೇಂದ್ರ ಸಿಂಗ್‌ಕಾಳಪ್ಪ ತಿಳಿಸಿದರು.

Advertisement

ಪಟ್ಟಣದ ಬಸ್‌ನಿಲ್ದಾಣದ ಸಮೀಪದಲ್ಲಿರುವ ಈಶ್ವರ ದೇವಸ್ಥಾನದ ಆವರಣದಲ್ಲಿ ಶರಣ ಸಾಹಿತ್ಯ ಪರಿಷತ್‌, ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್‌ ಹಾಗೂ ಬಸವ ಬಳಗಗಳ ಸಹಯೋಗದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಸವಣ್ಣನವರು ವಚನ ಸಾಹಿತ್ಯದ ಮೂಲಕ ನಾವೆಲ್ಲರೂ ಒಂದೆ ಎಂಬ ಸಂದೇಶ ಸಾರಲು ಯತ್ನಿಸಿದರು. ಬಸವಣ್ಣ ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರ. ಬಸವಣ್ಣ ಸಾಮಾನ್ಯರಿಗೂ ಅರ್ಥವಾಗುವು ಸರಳ ಭಾಷೆಯಲ್ಲಿ ವಚನಗಳನ್ನು ರಚಿಸಿದರು.

ಕಾರಣ ಸಾಮಾನ್ಯರೂ ಸಾಹಿತ್ಯದ ಮೂಲಕ ಸಮಾಜದ ಒಳಿತು ಬಯಸಬೇಕೆಂಬುದೇ ಅವರ ಉದ್ದೇಶವಾಗಿತ್ತು ಎಂದರು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣ ಭಾವಚಿತ್ರದ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್‌, ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್‌ ಹಾಗೂ ಬಸವ ಬಳಗದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next