ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆ ಗೆಲುವಿಗೆ ಮತದಾರರ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ ದಲ್ಲಿ ಮಾತನಾಡುತ್ತ ಸಿಎಂ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾಗೆ ದೂರವಾಣಿ ಮೂಲಕ ಆದೇಶ ನೀಡಿರುವ ಸಿದ್ದರಾಮಯ್ಯ, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಬಸವೇಶ್ವರರ ಭಾವಚಿತ್ರ ಅಳವಡಿಸಲು ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ.
Advertisement
ಮಹಾರಾಷ್ಟ್ರ ಕೂಡ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕುವಂತೆ 2013ರಲ್ಲಿ ಮಾಡಿರುವ ಆದೇಶದ ಪ್ರತಿ ಕೆಲದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿತ್ತು. ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕೂಡ ಮನವಿ ಮಾಡಿದ್ದರು.
ರಾಷ್ಟ್ರಪಿತ ಮಹಾತ್ಮ ಗಾಂಧಿ, ರಾಷ್ಟ್ರಪತಿ, ಪ್ರಧಾನಿ, ಅಂಬೇಡ್ಕರ್ ಹಾಗೂ ಮುಖ್ಯಮಂತ್ರಿ ಭಾವಚಿತ್ರಗಳನ್ನು ಕಡ್ಡಾಯವಾಗಿ ಹಾಕಲಾಗಿದೆ. ಈಗ ಅವುಗಳ ಜೊತೆಗೆ ಬಸವೇಶ್ವರರ ಫೋಟೊ ಕೂಡ ಈಗ ಸೇರ್ಪಡೆಯಾದಂತಾ ಗಿದೆ. ತಕ್ಷಣ ಆದೇಶ: ಸಿದ್ದು ಸೂಚನೆ
ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿಯೂ ಬಸವೇಶ್ವರರ ಭಾವಚಿತ್ರ ಹಾಕುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ಗುರುವಾರ ದುಬೈಗೆ ತೆರಳುವುದರಿಂದ ಇಂದೇ (ಬುಧವಾರ) ಈ ಆದೇಶ ಮಾಡಿದ್ದೇನೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಸವಣ್ಣ ಅವರ ಸಾಮಾಜಿಕ ನ್ಯಾಯದ ಹಿನ್ನೆಲೆ ಒಂದೇ ಆಗಿರುವುದರಿಂದ ಬಸವ ಜಯಂತಿ ವೇಳೆ ಕಡ್ಡಾಯ ವಾಗಿ ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿರುವಂತೆಯೇ ಬಸವಣ್ಣನವರ ಭಾವಚಿತ್ರ ಹಾಕಲು ಸುತ್ತೋಲೆ ಕಳುಹಿಸಲು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.