Advertisement

ಬೆಳಗಾವಿಯಲ್ಲಿ 17 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಸಚಿವ ಬೊಮ್ಮಾಯಿ

02:36 PM Dec 01, 2020 | sudhir |

ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಇಲಾಖೆಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ನಗರದ ಕಾಲೇಜು ರಸ್ತೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಮಂಗಳವಾರ (ಡಿ.1) ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು

ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಿಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ನಗರದಲ್ಲಿಯೇ ಎರಡು ಎಕರೆ ಜಾಗೆ ಲಭ್ಯವಿರುವುದರಿಂದ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಬೆಳಗಾವಿ ಮಹಾನಗರಕ್ಕೆ ತಕ್ಕಂತೆ ಎಲ್ಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ ಈಗಿರುವ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಯಲಿ, ಹೊಸ ಕಾಯ್ದೆ ಬೇಡ: ಸಿದ್ದು

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡರು.

Advertisement

ಇದಾದ ಬಳಿಕ ಕಟ್ಟಡದ ನೀಲನಕ್ಷೆ ವೀಕ್ಷಿಸಿದ ಸಚಿವ ಬಸವರಾಜ ಬೊಮ್ಮಾಯಿ ಅವರು, ಕೆಲ ಸಣ್ಣಪುಟ್ಟ ಮಾರ್ಪಾಡು ಮಾಡುವಂತೆ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಪಿ. ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ ಕೆ.ತ್ಯಾಗರಾಜನ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next