Advertisement
ಕೋರಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ 2019ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಘಟನೆ ನಡೆದು ನಾಲ್ಕು ದಿನಗಳ ಬಳಿಕ ಸಚಿವ ಅಶೋಕ್ ಪುತ್ರನ ಹೆಸರು ಕೇಳಿ ಬಂದಿದೆ. ಅಷ್ಟರಲ್ಲಿ ಎಫ್ಐಆರ್ ದಾಖಲಾಗಿದ್ದು, ಅದರಲ್ಲಿ ಅವರ ಹೆಸರಿಲ್ಲ. ಈ ಹಿನ್ನೆಲೆಯಲ್ಲಿ ಅವರ ಹೆಸರಿಲ್ಲ ಎಂದು ಹೇಳಿದ್ದೇನೆ. ಹೆಚ್ಚಿನ ತನಿಖೆಗೂ ಸೂಚಿಸಿದ್ದು, ತನಿಖಾಧಿಕಾರಿಗಳು ಬಹಿರಂಗ ಪಡಿಸಲಿದ್ದಾರೆ ಎಂದು ಪೊಲೀಸರು ಹೇಳಿದರು.
ಇನ್ನು ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ತಾನೂ ವಿರೋಧ ಪಕ್ಷದ ನಾಯಕ ಎಂದು ತೋರಿಸಿಕೊಳ್ಳಬೇಕಿದೆ. ಹೀಗಾಗಿ ಈ ರೀತಿ ಹೇಳಿಕೆ, ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕೆಲವೊಂದು ಪ್ರಕರಣದಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಿದೆ ಎಂದು ಹೇಳಿದರು. ದೇಶ ವಿರೋಧಿ ಘೋಷಣೆಗೆ ಅವಕಾಶವಿಲ್ಲ
ಹುಬ್ಬಳ್ಳಿಯಲ್ಲಿ ಪಾಕ್ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಪಡೆದುಕೊಳ್ಳಬೇಕಿದೆ. ಸದ್ಯ ಕೆಲ ಕಾಶ್ಮೀರಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರೇ ಆಗಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಲು ಅವಕಾಶ ಇಲ್ಲ ಎಂದು ಹೇಳಿದರು.