ಬೆಳಗಾವಿ: ದೀಪಾವಳಿ ಹಬ್ಬದ ನಿಮಿತ್ತ ಏಳುಕೊಳ್ಳದ ಶ್ರೀ ಯಲ್ಲಮ್ಮನ ಗುಡ್ಡಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಟುಂಬ ಸಮೇತರಾಗಿ ಬಂದು ದೇವಿಯ ದರ್ಶನ ಪಡೆದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುಲದೇವತೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಎಣ್ಣೆಹೊಂಡ ಹಾಗೂ ಪರಶುರಾಮ ಮತ್ತು ಯಲ್ಲಮ್ಮ ದೇವಸ್ಥಾನ ಪ್ರಾಂಗಣದಲ್ಲಿರುವ ದೇವಸ್ಥಾನಗಳಿಗೂ ಭೇಟಿ ನೀಡಿ ದರ್ಶನ ಪಡೆದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರೂ ಬಾಳಲ್ಲೂ ಬೆಳಕು ಮೂಡಿಸಲಿ ಎಂದರು.
ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ, ಬೈಲಹೊಂಗಲ ಉಪವಿಭಾಗಾಧಿಕಾರಿ ಬಗಲಿ, ತಹಶೀಲ್ದಾರ ಪ್ರಶಾಂತ ಪಾಟೀಲ ಸೇರಿದಂತೆ ದೇವಸ್ಥಾನ ಸಿಬ್ಬಂದಿ, ಅರ್ಚಕರು ಇದ್ದರು.
ಇದನ್ನೂ ಓದಿ : ಹಿಂದುಳಿದ ವರ್ಗಗಳ ಮುಖಂಡ ಈ. ಆಂಜನೇಯ ಬಿಜೆಪಿ ಸೇರ್ಪಡೆ