Advertisement
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು. ಕಾನೂನುಬದ್ಧವಾಗಿ ಬಡಾವಣೆಗಳು ಅಭಿವೃದ್ಧಿಯಾಗದಿದ್ದರೆ, ಮೂಲಭೂತ ಸೌಕರ್ಯಗಳ ಕೊರತೆಗಳಿರುವ ಕಂದಾಯ ನಿವೇಶಗಳು ದೊಡ್ಡ ಸಂಖ್ಯೆಯಲ್ಲಿ ಹೆಚ್ಚಾಗುತ್ತವೆ. ಈ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಬಡವರಿಗೆ ಮನೆ, ನಿವೇಶನ ಪಡೆಯಲು ಸರ್ಕಾರ ಕಾನೂನಿನ ಸರಳೀಕರಣ ಮಾಡಲಿದೆ ಎಂದರು.
ಒಂದು ಲಕ್ಷ ಮನೆಗಳನ್ನು ಮುಂದಿನ ಡಿಸೆಂಬರ್ ಒಳಗೆ ಮುಗಿಸಬೇಕು. ಇದು ಯಶಸ್ವಿಯಾದರೆ ಮತ್ತೂಂದು ಯೋಜನೆಯನ್ನು ಕೈಗೊಳ್ಳಲಾಗುವುದು ಎಂದರು.
Related Articles
ಬಡವರಿಗಾಗಿ ಸ್ಯಾಟಿಲೈಟ್ ಟೌನ್‌ಶಿಪ್ ನಿರ್ಮಿಸಲು ಯೋಜನೆ ಸಿದ್ಧಮಾಡಿ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ರಸ್ತೆ ಸಂಪರ್ಕ ಕಲ್ಪಿಸಿ, ಟೌನ್‌ಶಿಪ್ ಸ್ವಾವಲಂಬಿಯಾಗಿರುವಂತೆ ಮಾಡಬೇಕೆಂದು ಸೂಚಿಸಿದರು.
Advertisement
ವಸತಿ ಕ್ರಾಂತಿ:4 ಲಕ್ಷ ಗ್ರಾಮೀಣ ಮನೆಗಳು, ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆ, 97 ಸಾವಿರ ಮನೆಗಳನ್ನು ಕೊಳಗೇರಿಗಳಲ್ಲಿ ಪ್ರಾರಂಭ ಮಾಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳಾಗಲಿವೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ವಸತಿ ಕ್ರಾಂತಿ ಆಗಲಿದೆ. ನಿಗದಿತ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡು ಬಡವರ ತಲೆಯೆ ಮೇಲೆ ಸೂರು ಕಲ್ಪಿಸೋಣ ಎಂದರು. ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ 46,499 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 6 ಸಾವಿರ ಮನೆಗಳು ಶೇ 100ರಷ್ಟು ಪೂರ್ಣಗೊಂಡಿವೆ ಎಂದರು. ಫಲಾನುಭವಿಗಳು ಒಟ್ಟಿಗೆ ಹಣ ಕಟ್ಟಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಮುಂದೆ ಬಾರದ ಕಾರಣ ಯೋಜನೆ ಸ್ವಲ್ಪ ತಡವಾಗಿದೆ ಎಂದರು. ಸಭೆಯಲ್ಲಿ ಪೌರಾಡಳಿತ ಸಚಿವ ಎಂ.ಟಿ. ಬಿ.ನಾಗರಾಜ್, ಬಿ.ಡಿ.ಎ. ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್.ಅನಿಲ್ ಕುಮಾರ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ರವಿಶಂಕರ್, ವ್ಯವಸ್ಥಾಪಕ ನಿರ್ದೇಶಕ ಡಾ: ಬಸವರಾಜು ಮೊದಲಾದವರು ಉಪಸ್ಥಿತರಿದ್ದರು.