Advertisement

ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆ ಸಂತಸದ ಸಂಗತಿ: ಸಿಎಂ ಬಸವರಾಜ ಬೊಮ್ಮಾಯಿ

07:56 AM Oct 24, 2022 | Team Udayavani |

ಬೆಂಗಳೂರು; ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಹಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಆಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದು ಗೊತ್ತಿದೆ. ಇದಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

Advertisement

ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಸಲಾಗಿದೆ.

ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ಇದನ್ನೂ ಓದಿ : ಸೋಮವಾರದ ರಾಶಿ ಫಲ : ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು

Advertisement
Advertisement

Udayavani is now on Telegram. Click here to join our channel and stay updated with the latest news.

Next