ಮೈಸೂರು: ಚುನಾವಣೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಕಾರಣ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಳ್ಳು ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಚುನಾವಣೆಯಲ್ಲಿ ಸೋತ ಮೇಲೆ ರಾಜ ಕೀಯ ನಿವೃತ್ತಿಯಾಗುವ ಪರಿಸ್ಥಿತಿ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುತ್ತೂರು ಕ್ಷೇತ್ರ ದಲ್ಲಿ ಆಯೋಜಿಸಿರುವ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ಭರವಸೆಯನ್ನು ಈಡೇರಿಸದಿದ್ದಲ್ಲಿ ರಾಜೀನಾಮೆ ಕೊಡುವ ಮಾತನ್ನು ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಕಾಲದಲ್ಲಿ ಎಸ್ಕಾಂ ಗಳು ನಷ್ಟದಲ್ಲಿದ್ದವು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ 8 ಸಾವಿರ ಕೋಟಿ ರೂ. ನೇರ ಮತ್ತು 13,000 ಸಾವಿರ ಕೋಟಿ ರೂ.ಯನ್ನು ಸಾಲದ ರೂಪದಲ್ಲಿ ಕೊಟ್ಟು ಎಸ್ಕಾಂಗಳನ್ನು ಉಳಿಸಲಾಗಿದೆ. ಇದರಿಂದಾಗಿ ನಿರಂತರ ವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ವೈಜ್ಞಾನಿಕವಾಗಿ 75 ಯೂನಿಟ್ ವಿದ್ಯುತ್ ಕೊಡುತ್ತಿದ್ದೇವೆ. 200 ಯೂನಿಟ್ ವಿದ್ಯುತ್ ಕೊಡಲು ಯಾವ ಮಾನದಂಡ ಅನುಸರಿಸ ಲಿದ್ದಾರೆ? ಸೋಲಿನ ಭೀತಿಯಿಂದ ಸುಳ್ಳು ಹೇಳುತ್ತಿದ್ದಾರೆ ಎಂದರು. ಮೋದಿಯನ್ನು ಹಿಟ್ಲರ್‌ಗೆ ಹೋಲಿಸಿದ್ದಕ್ಕೆ ಕಿಡಿಕಾರಿದ ಸಿಎಂ, ಗುಜರಾತ್ ಚುನಾ ವಣೆ ವೇಳೆ ಬಾಯಿಗೆ ಬಂದಂತೆ ಮಾತನಾಡಿದ ಪರಿಣಾಮ ಅಲ್ಲಿನ ಫಲಿತಾಂಶ ಏನಾಯಿತು ಎಂಬುದು ಗೊತ್ತಿದೆ ಎಂದು ಹೇಳಿದರು.