Advertisement

Basavaraj Bommai ನೀತಿ ಆಯೋಗದ ಸಭೆಗೆ ಗೈರಾಗಿ ರಾಜ್ಯಕ್ಕೆ ಸಿಎಂ ಅನ್ಯಾಯ

10:54 PM Jul 28, 2024 | Team Udayavani |

ಗದಗ: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ಬೇಕಾದ ಯೋಜನೆಗಳ ಕುರಿತು ಚರ್ಚಿಸುವ ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರೈಲ್ವೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ಕೊಡದೇ ಕೇಂದ್ರ ಸರ್ಕಾರದ ವಿರುದ್ಧ ಅಸಹಕಾರ ತೋರುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದವರು ಅಪಪ್ರಚಾರದಲ್ಲಿ ನಿಸ್ಸೀಮರು.

ಕೇಂದ್ರದ ಮೇಲೆ ನಿರಂತರವಾಗಿ ಆಪಾದನೆ ಮಾಡುವುದು ಅವರಿಗೆ ಚಟವಾಗಿದೆ. ಕಾಂಗ್ರೆಸ್‌ ಪಕ್ಷದವರು ಅಪಪ್ರಚಾರ ಮಾಡುವ ಮೂಲಕ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆಂದು ವಾಗ್ಧಾಳಿ ನಡೆಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next