ನವದೆಹಲಿ : ಬಿಜೆಪಿ ಎಲ್ಲಾ ಚುನಾವಣೆಗಳಿಗೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಬಿಪಿಎಂ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ದವಿದೆಯೇ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಪಕ್ಷ ಅವರದ್ದನ್ನು ಅವರು ನೋಡಿಕೊಳ್ಳಬೇಕು. ಸಭೆಗಳಲ್ಲಿ ಬಡಿದಾಡಿಕೊಂಡು ಬಂದಿದ್ದಾರೆ. ನಾವು ಇಡೀ ರಾಜ್ಯ ಸುತ್ತಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ಮಾಡಿದ್ದೆವು. ಬಿಬಿಎಂಪಿಯಲ್ಲಿಯೂ ಸಭೆಗಳನ್ನು ಮಾಡಿದ್ದೇವೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಅಧ್ಯಯನ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸರ್ವೋಚ್ಚ ನ್ಯಾಯಾಲಯದ ಆದೇಶದ ಅಧ್ಯಯನಕ್ಕೆ ಸೂಚನೆ :
ಮಧ್ಯ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾನೂನು ಇಲಾಖೆಗೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ಸಂಪೂರ್ಣ ಅಧ್ಯಯನ ಮಾಡುವಂತೆ ತಿಳಿಸಿದ್ದೇನೆ ಎಂದರು.
ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರತಿ ನಮಗೆ ಬಂದಿಲ್ಲ. ಸರ್ವೋಚ್ಚ ನ್ಯಾಯಾಲಯ ಚುನಾವಣಾ ಆಯೋಗ ಏನು ತೀರ್ಮಾನ ಮಾಡುತ್ತಾರೆ ಅದನ್ನು ಪಾಲಿಸಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ ಚುನಾವಣಾ ಆಯೋಗದೊಂದಿಗೆ ಚರ್ಚೆ ಮಾಡಲಾಗುವುದು. ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು ಎಂದರು.
ಇದನ್ನೂ ಓದಿ : ಕೊಟ್ಟಿಗೆಹಾರ: ಗುಳಿಗ ದೈವದ ನುಡಿಯಂತೆ ಮರದ ಕೆಳಗೆ ಪತ್ತೆಯಾದ ವಿಗ್ರಹ