ಬೆಂಗಳೂರು: ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತಾರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಾಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶನಿವಾರ ವಿಧಾನಸೌಧದಲ್ಲಿ ಶಿಗ್ಗಾಂವಿ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗಿ ಆಯ್ಕೆಯಾಗಿ ದಿಲ್ಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ. ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದಿಲ್ಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3,800 ಕೊಟಿ ರೂ. ತಂದಿದ್ದೆ ಎಂದರು.