ದೇಶದಲ್ಲಿ ಕೋವಿಡ್ ಸೋಂಕು ಹಠಾತ್ ಏರಿಕೆ..!
ಭಾರತದಲ್ಲಿ ಮತ್ತೆ ಕೋವಿಡ್ ಸೋಂಕಿನ ಹೊಸ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 42, 625 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 562 ಮಂದಿ ಸಾವನ್ನಪ್ಪಿದ್ದಾರೆ. 36, 668 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಇಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.
ಇದು ಅಭಿವೃದ್ಧಿಯ ಹೆಸರಿನಲ್ಲಿ ನಡೆಸುತ್ತಿರುವ ಮೋಸ : ರಾಹುಲ್
ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಂದರೆ, ಭಾಷಣಗಳಲ್ಲಿ ಪ್ರಧಾನಿಯವರ ಕೌಶಲ್ಯ ಎಂದು ರಾಹುಲ್ ಗಾಂಧಿ ಆಕ್ರೋಶ್ ವ್ಯಕ್ತ ಪಡಿಸಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಅವರು, ಇದು ಅಭಿವೃದ್ಧಿಯ ಹೆಸರಿನಲ್ಲಿ ನಡೆಸುತ್ತಿರುವ ಮೋಸ. ಸರ್ಕಾರದ ‘ರೋಜ್‌ಗರ್ ಮಿಟಾಓ’ ಯೋಜನೆ ಎಂದು ಅವರು ಕಿಡಿ ಕಾರಿದ್ದಾರೆ.
ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ
ಭಾರಿ ಮಳೆಯ ಕಾರಣದಿಂದಾಗಿ ಉತ್ತರ ಮಧ್ಯ ಪ್ರದೇಶದ 1200 ಕ್ಕೂ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಸಂಪೂರ್ಣ ತತ್ತರಸಿ ಹೋಗಿವೆ. ರಾಜ್ಯ ಹಾಗೂ ಕೇಂದ್ರದ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ನೆರೆಯ ಕಾರಣದಿಂದಾಗಿ ಅಪಾಯದಂಚಿನಲ್ಲಿರುವ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕದ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಇಂದು(ಬುಧವಾರ, ಆಗಸ್ಟ್ 4) ರಾಜ ಭವನದಲ್ಲಿ ಸರಳ ಸಮಾರಂಭದಲ್ಲಿ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರಿಂದ ಒಟ್ಟು 29 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವುದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ಒಲಿಂಪಿಕ್ಸ್ ನ ‘ಲವ್ಲಿ’ ಕಂಚಿನ ಪದಕ
ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಭಾರತದ ಲವ್ಲಿನಾ ಬೊರ್ಗೊಹೇನ್ ಬುಧವಾರ ಸೆಮಿಫೈನಲ್ ನಲ್ಲಿ ಪರಾಜಯಗೊಂಡಿದ್ದು, ಕಂಚಿನ ಪದಕ ಗೆದ್ದಂತಾಗಿದೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬಳಿಕ ಕಂಚಿನ ಪದಕ ಜಯಿಸಿದ ಎರಡನೇ ಅಥ್ಲೀಟ್ ಎನಿಸಿಕೊಂಡಿದ್ದಾರೆ.
ಜೋನ್ ಸಾವು ಲಾಕಪ್ ಡೆತ್ ಅಲ್ಲ : ಕಮಲ್ ಪಂತ್
ಪೊಲೀಸರ ಮೇಲೆ ಹಲ್ಲೆ ನಡೆಸಿದ ಐವರು ಆಫ್ರಿಕಾ ಪ್ರಜೆಗಳ ಪೈಕಿ ಒಬ್ಬ ಮಾದಕ ವಸ್ತು ಸೇವಿಸಿದ್ದು, ಇತರರು ಮದ್ಯ ಸೇವಿಸಿ ಠಾಣೆ ಮುಂದೆ ದಾಂಧಲೆ ನಡೆಸಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಜೋನ್ ಸಾವು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅನಂತನಾಗ್ ಸಾಕ್ಷ್ಯ ಚಿತ್ರ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ
ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಂಡ ಅನಂತನಾಗ್ ಅವರ ಜೀವನ ಮತ್ತು ಸಿನಿ ಸಾಧನೆಯನ್ನು ಬಿಂಬಿಸುವ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದು, ಈ ಸಾಕ್ಷ್ಯಚಿತ್ರದ ಮೂಲಕ ಅಪರೂಪದ ಕಲಾವಿದ ಅನಂತನಾಗ್ ಅವರ ಸಿನಿಮಾ ಯಾನವನ್ನು ಸಂಕ್ಷಿಪ್ತವಾಗಿ ಪರಿಚಯ ಮಾಡಿಕೊಡಲಾಗಿದೆ. ರಕ್ಷಿತ್ ಶೆಟ್ಟಿ, ಪುನೀತ್ ರಾಜಕುಮಾರ್, ಯಶ್, ದುನಿಯಾ ವಿಜಯ್ ಹೀಗೆ ಕನ್ನಡದ ಅನೇಕ ಸ್ಟಾರ್ ನಟರು ಅಪ್ರತಿಮ ನಟ ಅನಂತನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಒತ್ತಾಯಿಸಿದ್ದರು.
“ಮ್ಯಾನ್ ಆಫ್ ದಿ ಮ್ಯಾಚ್’ ಗಾಯಕ ವಾಸುಕಿ ವೈಭವ್ ವೀಶೇಷ ಪಾತ್ರ
ಇತ್ತೀಚೆಗಷ್ಟೇ “ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರಕ್ಕೆ ನಟ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಬಂಡವಾಳ ಹೂಡುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಇದೀಗ ಚಿತ್ರತಂಡದಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಚಿತ್ರದ ಹಾಡೊಂದರಲ್ಲಿ ಗಾಯಕ ಕಂ ಸಂಗೀತ ನಿರ್ದೇಶಕ, ಮಾಜಿ ಬಿಗ್‌ಬಾಸ್ ಕನ್ನಡ ಸೀಸನ್-7ರ ಸ್ಪರ್ಧಿ ವಾಸುಕಿ ವೈಭವ್ ಒಂದು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವಿಷಯವನ್ನು ಚಿತ್ರ ತಂಡ ಹೊರ ಹಾಕಿದೆ.