Advertisement
2022-23ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರಗಿದ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಪಶು ಚಿಕಿತ್ಸಾಲಯಗಳನ್ನು ಹೊಸ ಮಾದರಿಯಲ್ಲಿ ಮಾಡಬೇಕು. ಸಿಬಂದಿ ನೇಮಕಾತಿಗಾಗಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ನೇಮಿಸ ಬೇಕು. 50 ಪಶು ಚಿಕಿತ್ಸಾಲಯಗಳನ್ನು ಬಾಡಿಗೆ ಆಧಾರದ ಮೇಲೆ ಪ್ರಾರಂಭಿಸಲು ಅನುಮತಿ ನೀಡಬೇಕೆಂದೂ ಸೂಚಿಸಿದರು.
ಗೋಶಾಲೆ ಸಂಖ್ಯೆಯನ್ನು 31ರಿಂದ 100ಕ್ಕೆ ಹೆಚ್ಚಿಸುವ ಸಂಬಂಧ 70 ಹೊಸ ಗೋಶಾಲೆಗಳನ್ನು ಸ್ಥಾಪಿಸಲು ನಿವೇಶನ ಗುರುತಿಸುವಂತೆ ಸಿಎಂ ಸೂಚಿಸಿದ್ದಾರೆ. ಪುಣ್ಯ ಕೋಟಿ ದತ್ತು ಯೋಜನೆಯ ಪೋರ್ಟಲ್ ಅನ್ನು ಜೂನ್ ತಿಂಗಳಾಂತ್ಯದಲ್ಲಿ ಪ್ರಾರಂಭಿ ಸುವಂತೆ, ಯಾವ ಗೋಶಾಲೆಯಲ್ಲಿ ಯಾವ ಗೋವುಗಳನ್ನು ದತ್ತು ಪಡೆಯಲಾಗಿದೆ ಎನ್ನುವುದನ್ನು ಪೋರ್ಟಲ್‌ನಲ್ಲಿ ತಿಳಿಸು ವಂತೆಯೂ ನಿರ್ದೇಶಿಸಿದ್ದಾರೆ. ಗೋ ತಳಿ ಸಂರಕ್ಷಣೆ ಮತ್ತು ಅವುಗಳ ಸಂತತಿ ಹೆಚ್ಚಿಸಲು ಕೆಎಂಎಫ್ ಮೂಲಕ 2000 ಗೋ ತಳಿಗಳನ್ನು ರೈತರಿಗೆ ಹಂಚಲು ಈ ವರ್ಷ 4 ಕೋಟಿ ರೂ. ಅನುದಾನ ಒದ ಗಿಸುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ಗೋ ಉತ್ಪನ್ನಗಳ ತಾಂತ್ರಿಕತೆ ಅಭಿವೃದ್ಧಿಗಾಗಿ ಸಂಶೋಧನ ಕೋಶ ಸ್ಥಾಪನೆ, ಕುರಿಗಾಹಿ ಗಳಿಗೆ ವಸತಿ ಸೌಕರ್ಯದ ಜತೆಗೆ ಕುರಿ ದೊಡ್ಡಿ ನಿರ್ಮಿಸಲು 5 ಲಕ್ಷ ರೂ. ಸಹಾಯಧನ, ನರೇಗಾ ಮತ್ತು ರಾಜೀವ್ ಗಾಂಧಿ ವಸತಿ ನಿಗಮ ಸೇರಿಸಿ 5,000 ಮನೆ ನಿರ್ಮಿಸಿ ಕೊಡಲು ಸೂಚಿಸಿದ್ದಾರೆ.
Related Articles
Advertisement