Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗಿತ್ತು. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ವಿಧಾನ, ರಹಸ್ಯ ಮತದಾನದ ಸರ್ಕಸ್‌ಗಳಿಂದ ಅದು ಸ್ಪಷ್ಟವಾಗಿತ್ತು. ಗ್ಯಾರಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಎಂದು ಸಿದ್ದರಾಮಯ್ಯನವರೇ ಶಾಸಕರಿಗೆ ಹೇಳಿದ್ದಾರೆ. ಈಗ ಶಾಸಕರೇ ಬಹಿರಂಗ ಪತ್ರ ಬರೆಯುತ್ತಿದ್ದಾರೆ. ಇದೆಲ್ಲ ಲಕ್ಷ್ಯ ಬೇರೆಡೆ ಸೆಳೆಯಲು ಸಿಂಗಾಪುರದ ಕತೆ ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು.
ಯಿಂದ ಆಗಿರುವ ಡ್ಯಾಮೆಜ್ ಕಂಟ್ರೋಲ್ ಮಾಡಲು ಸಿಂಗಾಪುರ ತಂತ್ರದ ಬಗ್ಗೆ ಹೇಳಿ¨ªಾರೆ. ಡಿ.ಕೆ. ಶಿವಕುಮಾರ್ ಅವರು ಮುಂದೆ ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಾವೊಬ್ಬ ಅಸಮಾಧಾನಿತ ಎಂದು ಅವರು ತೋರಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯ ಹೈಕಮಾಂಡ್ ಈ ಸರಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಸಿ.ಎಂ.-ಡಿ.ಸಿ.ಎಂ. ಹೊಂದಾಣಿಕೆಯೇ ಇಲ್ಲ
ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿ ಪ್ರಾಯವಿದೆ. ಸರಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಶಿವಕುಮಾರ್ ಹೇಳಿಕೆ ನೀಡಿದರೂ ಸಿಎಂಗೆ ಮಾಹಿತಿ ಇಲ್ಲ ಎಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲವೆಂದು ಅರ್ಥವಲ್ಲವೇ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಬೊಮ್ಮಾಯಿ ಹೇಳಿದರು.