Advertisement

ಭಿನ್ನಾಭಿಪ್ರಾಯಗಳ ಬಗ್ಗೆ  ಸಿಎಂ ಜತೆ ಚರ್ಚಿಸಿ -ಬಸವರಾಜ ಬೊಮ್ಮಾಯಿ ಸೂಚನೆ

05:11 PM Apr 01, 2021 | Team Udayavani |

ಬೆಂಗಳೂರು: ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಮನವಿ ಮಾಡಿದರು.

Advertisement

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಲಾಖೆಯ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುವುದಾಗಿ ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ನಾನು ಗಮನಿಸಿದ್ದೇನೆ. ತುರ್ತಾಗಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ಸಲಹೆ ನೀಡಿದರು.

ಕಳೆದ ವರ್ಷ ಕೋವಿಡ್ ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ಇತ್ತೀಚೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ.  ಶಾಸಕರ ಒತ್ತಡದ ಮೇರೆಗೆ ಶಾಸಕರಿಗೆ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:ಸಚಿವ ಈಶ್ವರಪ್ಪ ಸಿಎಂ ವಿರುದ್ಧ ನೀಡಿರುವ ದೂರಿನ‌ ಬಗ್ಗೆ ನನಗೇನೂ ತಿಳಿಯದು – ಕಾರಜೋಳ

ಸಿಎಂ ಹಣಕಾಸು ಖಾತೆಯ ಸಚಿವರೂ ಆಗಿರುವುದರಿಂದ ಅವರೇ ಶಾಸಕರಿಗೆ ಹಣವನ್ನು ಬಿಡುಗಡೆ ಮಾಡಿದ್ದಾರೆ. ಅನುದಾನ ಬಿಡುಗಡೆ ವಿಚಾರದಲ್ಲಿ ಆಕ್ಷೇಪಗಳಿದ್ದರೆ ಅದನ್ನು ಸಿಎಂ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು . ಇದು ಆಡಳಿತಾತ್ಮಕ ವಿಷಯ ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ಸೂಕ್ತ ಅಲ್ಲ ಎಂದು ಬೊಮ್ಮಾಯಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು .

Advertisement

ನಮ್ಮದು ಶಿಸ್ತಿನ ಪಕ್ಷ.  ಶಿಸ್ತು ಉಲ್ಲಂಘನೆ ಆಗಬಾರದು. ಸಿಎಂ ನೇತೃತ್ವದಲ್ಲಿ ಆಡಳಿತ ಮಾಡುತ್ತಿದ್ದೇವೆ.  ಜನಕಲ್ಯಾಣ ಕೆಲಸ ಮಾಡುತ್ತಿದ್ದೇವೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಈಶ್ವರಪ್ಪ ಅವರು ಆದಷ್ಟು ಬೇಗ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿ. ಆದಷ್ಟು ಬೇಗ ಶಾಸಕರಿಗೆ ಅನುದಾನ ಸಿಗುವಂತಾಗಲಿ.  ಈ ವಿಷಯವನ್ನು ವರಿಷ್ಠರ ಬಳಿ ತೆಗೆದುಕೊಂಡು ಹೋಗುವ ಅವಶ್ಯಕತೆ ಇಲ್ಲ.  ಇಲ್ಲಿಯೇ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next