Advertisement

ಕುಕ್ಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

12:19 AM Apr 13, 2023 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ, ಸಂಪುಟ ನರಸಿಂಹ ಸ್ವಾಮಿ ಮತ್ತು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

Advertisement

ದೇವಸ್ಥಾನಕ್ಕೆ ಆಗಮಿಸಿದ ಮುಖ್ಯ ಮಂತ್ರಿಗಳನ್ನು ಸ್ವಾಗತಿಸಿ, ಗೌರವಿಸಲಾಯಿತು. ಈ ವೇಳೆ ಬೊಮ್ಮಾಯಿ ಅವರ ಪತ್ನಿ ಚೆನ್ನಮ್ಮ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಸದಸ್ಯರಾದ ವನಜಾ ವಿ. ಭಟ್‌, ಶೋಭಾ ಗಿರಿಧರ್‌, ಮಾಸ್ಟರ್‌ಪ್ಲಾನ್‌ ಸದಸ್ಯ ಮನೋಜ್‌ ಕುಮಾರ್‌, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಸುಳ್ಯ ನ.ಪಂ.ಅಧ್ಯಕ್ಷ ವಿನಯಕುಮಾರ್‌ ಕಂದಡ್ಕ, ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಉಪಸ್ಥಿತರಿದ್ದರು.

ಸಿಎಂ ಭೇಟಿ ಹಿನ್ನೆಲೆಯಲ್ಲಿ ಬಿಳಿನೆಲೆಯಿಂದ ಕುಕ್ಕೆ ಸುಬ್ರಹ್ಮಣ್ಯ ವರೆಗೆ ಹೆಚ್ಚುವರಿ ಪೊಲೀಸರಿಂದ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. ಸಿಎಂ ಬೊಮ್ಮಾಯಿ ಕ್ಷೇತ್ರಕ್ಕೆ ಆಗಮಿಸುವ ಕೆಲ ಕ್ಷಣದ ಮೊದಲು ಮಳೆ ಆರಂಭಗೊಂಡಿದ್ದು, ಮುಖ್ಯಮಂತ್ರಿಗಳು ದೇವರ ದರುಶನ ಪಡೆದು ತೆರಳುವ ವೇಳೆಗೆ ಮಳೆ ವಿರಾಮ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next