Advertisement

ಪೌರತ್ವ ಕಾಯ್ದೆ ಅರಿವು ಮೂಡಿಸಲು ಪೋಸ್ಟ್ ಕಾರ್ಡ್ ಅಭಿಯಾನದ ಸಹಿ ಸಂಗ್ರಹ

09:38 AM Jan 08, 2020 | keerthan |

 

Advertisement

ಸುರತ್ಕಲ್: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವುದು ಮತ್ತು ವಾಸ್ತವಾಂಶ ಮರೆಮಾಚಿ ಸುಳ್ಳು ಸುದ್ದಿ ಹರಡಿಸಿ ಜನರನ್ನು ದಾರಿ ತಪ್ಪಿಸುತ್ತಿರುವವರ ಪ್ರಯತ್ನವನ್ನು ವಿಫಲಗೊಳಿಸುವ ಕಾರಣಕ್ಕೆ ಪೋಸ್ಟ್ ಕಾರ್ಡ್ ಅಭಿಯಾನದ ಸಹಿ ಸಂಗ್ರಹ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ಸುರತ್ಕಲ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ  ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅಲ್ಪಸಂಖ್ಯಾತರಿಗೆ ಹೆದರಿಕೆ ಹುಟ್ಟಿಸಿ, ತಪ್ಪು ಮಾಹಿತಿ ನೀಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇದನ್ನು ಸರಿಪಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಅವರು ಅನ್ಯಾಯ, ತುಳಿತಕ್ಕೊಳಗಾದವರಿಗೆ ಭದ್ರತೆ ಕೊಡಲು ಮುಂದಾದರೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್  ಕಟೀಲ್, ಶಾಸಕ ಡಾ|ಭರತ್ ಶೆಟ್ಟಿ, ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಸಹಿತ ಪಕ್ಷದ ಮುಖಂಡರು, ಮನಪಾ ಸದಸ್ಯರು, ಕಾರ್ಯಕರ್ತರು, ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next