Advertisement

Bommai;ಕೇಂದ್ರ ಸಚಿವ ಅಮಿತ್‌ ಶಾ ಭೇಟಿಯಾದ ಬಸವರಾಜ ಬೊಮ್ಮಾಯಿ: ವಿಪಕ್ಷ ಸ್ಥಾನ ಆಯ್ಕೆ ಚರ್ಚೆ

06:27 PM Aug 08, 2023 | Team Udayavani |

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ (ಆಗಸ್ಟ್‌ 08) ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ಇದನ್ನೂ ಓದಿ:Sanju Samson ಒಳ್ಳೆಯ ವ್ಯಕ್ತಿ, ಆದರೆ…: ವಿಶ್ವಕಪ್ ತಂಡದ ಬಗ್ಗೆ ಅಶ್ವಿನ್ ಮಾತು

ಬೊಮ್ಮಾಯಿ ಅವರು ಸೋಮವಾರ ದಿಲ್ಲಿಗೆ ಆಗಮಿಸಿದ್ದು, ನಿಗದಿತ ಕಾರ್ಯಕ್ರಮದಂತೆ ಕೇಂದ್ರ ಸಚಿವ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯದ ಕುರಿತು ಚರ್ಚೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನದ ಆಯ್ಕೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆನ್ನಲಾಗಿದೆ.


ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬೊಮ್ಮಾಯಿ ಅವರನ್ನು ಮಾತುಕತೆ ಆಹ್ವಾನಿಸಿದ್ದರು ಎಂದು ಮೂಲಗಳು ಹೇಳಿವೆ.

Advertisement

ಈಗಾಗಲೇ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಸುರೇಶ್‌ ಕುಮಾರ್‌, ವಿ.ಸುನೀಲ್‌ ಕುಮಾರ್‌, ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ್‌, ಆರ್.ಅಶೋಕ್‌, ಅರವಿಂದ್‌ ಬೆಲ್ಲದ್‌ ಅವರ ಹೆಸರು ವಿಪಕ್ಷ ನಾಯಕನ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವ ಬಗ್ಗೆ ಹೆಸರು ಕೇಳಿ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next