Advertisement
ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
Related Articles
Advertisement
ಜುಲೈ-ಆಗಸ್ಟ್ ಸಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಲಸಿಕೆ ನೀಡುವ ಅಭಿಯಾನ ನಡೆಯಲಿದೆ. ಸದ್ಯಕ್ಕೆ ಕೋವಿಡ್ ವಾರಿಯರ್ ಮತ್ತು ಎರಡನೇ ಡೋಸ್ ಪಡೆಯಲು ಅರ್ಹರಿರುವವರಿಗೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಹಾವೇರಿ ಜಿಲ್ಲೆಗೆ 51 ವೈದ್ಯರ ನೇಮಕ:
ಹಾವೇರಿ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇದ್ದ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಸದ್ಯಕ್ಕೆ 51 ಜನ ವೈದ್ಯರನ್ನು ನೇಮಕ ಮಾಡಲಾಗಿದೆ. ವೈದ್ಯರ ಅಗತ್ಯತೆಯನ್ನು ಇದು ನಗಿಸುತ್ತದೆ ಎಂಬ ಸಮಾಧಾನ ನನಗಿದೆ. ಅವರು ಬೇಗ ಬಂದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡುತ್ತೇನೆ. ಖಾಲಿ ಇರುವ ಇನ್ನಷ್ಟು ವೈದ್ಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಬ್ಲಾಕ್ ಫಂಗಸ್ ಎಂಬ ಚಾಲೆಂಜ್:
ಹಾವೇರಿ ಜಿಲ್ಲೆಯಲ್ಲಿ ನಮಗೆ ಮುಖ್ಯವಾಗಿ ಚಾಲೆಂಜ್ ಇರೋದು ಬ್ಲಾಕ್ ಫಂಗಸ್. ಈ ಸೋಂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಔಷಧ ನೀಡುವಂತೆ ಕೇಂದ್ರ ರಾಸಾಯನಿಕ ಸಚಿವ ಡಿವಿ ಸದಾನಂದ ಗೌಡರಿಗೆ ಮನವಿ ಮಾಡಿದ್ದೇನೆ ಹಾವೇರಿ ಜಿಲ್ಲೆಗೆ ಹೆಚ್ಚಿನ ಪ್ರಮಾಣದ ಔಷಧಿಯನ್ನು ನೀಡುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.
ಮಕ್ಕಳಿಗಾಗಿ ವಿಶೇಷ ಐಸಿಯು: ಸೋಂಕು ತಗುಲಿದ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳಿಗಾಗಿಯೇ ವಿಶೇಷ ವಾರ್ಡ್ ನಿರ್ಮಾಣ ಮಾಡುವಂತೆ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ. ಹೆರಿಗೆ ವಾರ್ಡ್ ಅನ್ನು ವಿಶೇಷವಾಗಿ ಮಕ್ಕಳ ಐಸಿಯು ವಾರ್ಡ್ ಗಳನ್ನಾಗಿ ಪರಿವರ್ತನೆ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸದರು.