Advertisement

ನಾಳೆ ಸಿಎಂ ಸಭೆಯ ನಂತರ ಲಾಕ್ ಡೌನ್, ಸೀಲ್ ಡೌನ್ ವಿಚಾರ ನಿರ್ಧಾರ: ಗೃಹ ಸಚಿವ ಬೊಮ್ಮಾಯಿ

09:18 AM Apr 11, 2020 | keerthan |

ಹಾವೇರಿ: ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಕೆ ಅಥವಾ ಸೀಲ್ ಡೌನ್ ಹಾಕುವ ಬಗ್ಗೆ ಹಾವೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು,  ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದರು.

Advertisement

ಹಾವೇರಿಯಲ್ಲಿ ಮಾತನಾಡಿದ ಗೃಹ ಸಚಿವರು, ಲಾಕ್ ಡೌನ್ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಅಭಿಪ್ರಾಯಗಳು ಕೇಳಿ ಬಂದಿವೆ. ಶನಿವಾರ ಪ್ರಧಾನಿ ಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಂತರ ನಿರ್ಧಾರ ಮಾಡಲಾಗುವುದು ಎಂದರು.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಸಾವುಗಳು ಕಡಿಮೆ ಇವೆ. ನಮ್ಮ ಪ್ರಧಾನಿಯವರ ದೂರದೃಷ್ಟಿಯಿಂದ ಅದು ಸಾಧ್ಯವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next