Advertisement

ಸಣ್ಣಪುಟ್ಟ ಅಸಮಾಧಾನ ಇರಬಹುದು, ಆದರೆ…: ಸಿಎಂ ಬಸವರಾಜ ಬೊಮ್ಮಾಯಿ

12:24 PM Aug 09, 2021 | Team Udayavani |

ಮೈಸೂರು:  ಸಚಿವ ಸಂಪುಟ ರಚನೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ವಿಶೇಷ ಸಂದರ್ಭದಲ್ಲಿ ಸಚಿವ ಸಂಪುಟ ರಚನೆಯಾಗಿದೆ.  ಎಲ್ಲರೂ ಸಹಕಾರ ಕೊಡುತ್ತಿದ್ದಾರೆ. ಸಣ್ಣಪುಟ್ಟ ಅಸಮಾಧಾನ ಇರಬಹುದು. ಅದನ್ನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮೈಸೂರಿನ‌ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರಾಮದಾಸ್ ನನ್ನ ಆತ್ಮೀಯ ಸ್ನೇಹಿತರು. ಪಕ್ಷದಲ್ಲಿ ಅವರು ಹಿರಿಯರಾಗಿದ್ದಾರೆ. ಅವರನ್ನು ಕರೆಸಿ ಮಾತನಾಡುತ್ತೇನೆ ಎಂದರು.

ಮೇಕೆದಾಟು ನದಿ ನೀರು ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು,  ತಮಿಳುನಾಡಿನಲ್ಲಿ ನೀರಿನ ರಾಜಕಾರಣ ಮೊದಲಿನಿಂದಲೂ ಇದೆ. ಕಾವೇರಿ ನದಿ ನೀರು ಹಂಚಿಕೆಯ ವಿಚಾರ ಮುಂದಿಟ್ಟುಕೊಂಡು ಎಷ್ಟೋ ಪಕ್ಷಗಳು ಅಧಿಕಾರಕ್ಕೆ ಬಂದು ಹೋಗಿವೆ. ತಮಿಳುನಾಡಿನವರು ಏನೇ ಹೇಳಿದರು ನಾವು ಮೇಕೆದಾಟು ಯೋಜನೆ ಮಾಡಿಯೇ ಮಾಡುತ್ತೇವೆ ಎಂದರು.

ಇದನ್ನೂ ಓದಿ:ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಕಾವೇರಿ ಕೊಳ್ಳದಲ್ಲಿ ಲಭ್ಯವಾಗುವ ಗರಿಷ್ಠ ಪ್ರಮಾಣದ ನೀರಿನ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್ ತಯಾರಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನ ಭೇಟಿ ಮಾಡುತ್ತೇನೆ. ಸುಪ್ರೀಂ ಸಿಕೊರ್ಟ್ ನೀಡಿರುವ ತೀರ್ಪು ಕಾನೂನಾತ್ಮಕ ವಾಗಿ ನಮಗೆ ಇರುವ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುತ್ತೇನೆ. ಕಾನೂನು ತಜ್ಞರ ಜೊತೆಗೂ ಚರ್ಚೆ ನಡೆಸುತ್ತೇನೆ. ನಮ್ಮ ನೀರು ನಮ್ಮ ಹಕ್ಕು ಅದನ್ನು ಪಡೆದುಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisement

ಯಡಿಯೂರಪ್ಪ ಅವರಿಗೆ ನೀಡಿದ ಕ್ಯಾಬಿನೆಟ್ ಸ್ಥಾನಮಾನದ ಸವಲತ್ತು ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಸವಲತ್ತನ್ನು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ. ಇದನ್ನು ನಾನು ಒಪ್ಪಿಕೊಂಡಿದ್ದೇನೆ. ಅವರಿಗೆ ನಿಕಟ ಪೂರ್ವ ಸಿಎಂ‌ಗೆ ಸಿಗಬೇಕಾದ ಸ್ಥಾನಮಾನ ಎಂದಿನಂತೆ ನೀಡುತ್ತೇವೆ ಎಂದು ಹೇಳಿದರು.

ವೀಕೆಂಡ್ ಕರ್ಫ್ಯೂವನ್ನ ಗಡಿ ಜಿಲ್ಲೆಗಳ ಸ್ಥಿತಿಗತಿ ಮೇಲೆ ನಿರ್ಧರಿಸಿ ಆದೇಶ ಮಾಡಲಾಗಿದೆ. ಈಗ ಮೈಸೂರಿನ ಬಗ್ಗೆ ಸಭೆ ಮಾಡಿ ಚರ್ಚೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next