Advertisement
ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತೀಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. Advertisement
Bommai: ಮತದಾರರಿಗೆ ಕುಕ್ಕರ್ ಹಂಚಿಕೆ; ಯತೀಂದ್ರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು
06:40 PM Sep 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.