Advertisement

Hubballi: ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಕುರ್ಚಿಗಾಗಿ ಒಳ ಬೇಗುದಿ ಹೆಚ್ಚಾಗಿದೆ: ಬೊಮ್ಮಾಯಿ

03:17 PM Dec 06, 2024 | Team Udayavani |

ಹುಬ್ಬಳ್ಳಿ: ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಒಳ ಬೇಗುದಿ ಮುಂದಿನ ದಿನಗಳಲ್ಲಿ ದೊಡ್ಡ ಸ್ವರೂಪ ಪಡೆಯುತ್ತದೆ. ಈಗಾಗಲೇ ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಳ್ಳಲು ಡಿ.ಕೆ.ಶಿವಕುಮಾರ ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಗೃಹ ಸಚಿವ ಪರಮೇಶ್ವರ ಅವರು ಕೂಡ ಧ್ವನಿ ಎತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಸಿದ್ಧರಾಮಯ್ಯ ಅವರು ಫೆವಿಕಾಲ್ ಹಾಕಿ ಕೂತಿದ್ದಾರೆ. ಇದನ್ನು ಕಿತ್ತಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತುದಿಗಾಲಲ್ಲಿ ನಿಂತಿದ್ದಾರೆ. ಈ ಬೇಗುದಿ ಕಾಂಗ್ರೆಸ್ ಸರಕಾರದಲ್ಲಿ ಮೊದಲಿನಿಂದಲೂ ಇದೆ. ಇವರಿಬ್ಬರ ಕಿತ್ತಾಟದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಎಲ್ಲವನ್ನು ಇವರಿಬ್ಬರೇ ಮಾಡಿದರೆ ನಮ್ಮದೇನು ಪಾತ್ರ ಎನ್ನುವ ಹೇಳಿಕೆಯು ಒಳ ಬೇಗುದಿಯನ್ನು ಮತ್ತಷ್ಟು ಹೆಚ್ಚಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ ಎಂದರು.

ಕಾಂಗ್ರೆಸ್ ನವರು ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ಜನರ ಹಣದಲ್ಲಿ ಇವರು ಸಮಾವೇಶ ಮಾಡುತ್ತಿದ್ದಾರೆ. ಜನರಿಗೆ ಆನೆ ಬಲ ತುಂಬುವ ಬದಲು ತಮ್ಮ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಜನ ಕಲ್ಯಾಣ ಮಾಡಲಿ ಅಂತ ಅಧಿಕಾರ ನೀಡಿದ್ದಾರೆ. ಆದರೆ ಇವರು ಜನರನ್ನೇ ಮರೆತಿದ್ದಾರೆ. ಇದೊಂದು ಜೀರೋ ಸರಕಾರವಾಗಿದೆ. ಅಭಿವೃದ್ಧಿ, ಸಾಮಾಜಿಕ ನ್ಯಾಯ, ಕಾನೂನು ವ್ಯವಸ್ಥೆ ಸೇರಿದಂತೆ ಎಲ್ಲದರಲ್ಲಿಯೂ ಜೀರೋ. ಅರ್ಥಿಕ ವ್ಯವಸ್ಥೆಯಲ್ಲಿ ಸಂಪೂರ್ಣ ದಿವಾಳಿಯಾಗಿದೆ. ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಈ ಸರಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: NIA: ವಿಧ್ವಂಸಕ ಕೃತ್ಯಕ್ಕೆ ಸಂಚು: ಎಲ್‌ಇಟಿ ಉಗ್ರ ಸಲ್ಮಾನ್‌ ಎನ್‌ಐಎ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next