Advertisement

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

02:31 PM Nov 06, 2024 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.‌ ಪೇ ಡಬಲ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಧಿಕಾರದಲ್ಲಿದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳುತ್ತಾ ಇದ್ದರು. ಆದರೀಗ 40 ಶೇಕಡಾ ಅಲ್ಲಾ ಪೇ ಡಬಲ್ ಪೇಮೆಂಟ್ ಸಿಎಂ ಆಗಿದೆ. ಅಬಕಾರಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಿಗ್ಗಾವಿ ಕ್ಷೇತ್ರದ ಅಭಿವೃದ್ಧಿಯನ್ನು ಜನ ಅನುಭವಿಸಿದ್ದಾರೆ. ಕಾಂಗ್ರೆಸ್‌ನವರ ಆಲೋಚನೆಗಳಿಗೂ ಶಿಗ್ಗಾವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸವಿದೆ. ಸರ್ಕಾರ ಅವರದೇ ಇದೆ. ಶಿಗ್ಗಾವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್ ಟೈಲ್ ಪಾರ್ಕ್ , ಸವಣೂರಿನಲ್ಲಿ ಆಯುರ್ವೆದಿಕ್ ಕಾಲೇಜ್, ಐಟಿಐ ಕಾಲೇಜ್, ಪ್ರವಾಹ ಸಂದರ್ಭದಲ್ಲಿ 12,000ಕ್ಕಿಂತ ಹೆಚ್ಚು ಮನೆ ನಿರ್ಮಾಣ, ಬೆಂಗಳೂರಿಗಿಂತ ಒಳ್ಳೆಯ ರಸ್ತೆ ಶಿಗ್ಗಾವಿಯಲ್ಲಿವೆ. ಸಿಎಂ ಕಾರ್‌ನಲ್ಲಿ ಹೋಗುವಾಗ ನಿದ್ದೆ ಮಾಡುತ್ತಿರುತ್ತಾರೋ ಏನೋ ಗೊತ್ತಿಲ್ಲ ಎಂದು ಹರಿಹಾಯ್ದರು.

ಕಾಗಿನೆಲೆ ಗುರು ಪೀಠದ ಸ್ವಾಮೀಜಿ ಬಗ್ಗೆ ಒಬ್ಬ ಮುಖ್ಯಮಂತ್ರಿಯಾಗಿ ಗುರುಗಳಿಗೆ ದಾಷ್ಟ್ಯದ ಮಾತು ಹೇಳುವುದು ಅವರಿಗೆ ಅವಮಾನ ಮಾಡಿದಂತೆ‌, ಅವರು ನಮ್ಮ ಗುರುಗಳು. ಅವರ ನಮ್ಮ ನಡುವೆ ಗುರು ಭಕ್ತರ ಸಂಬಂಧವಿದೆ. ಚುನಾವಣೆ ಸೋಲಿನ ಭಯದಲ್ಲಿ ಸಿಎಂ ಸ್ವಾಮೀಜಿ ಎಳೆ ತರುವ ಪ್ರಯತ್ನ ಮಾಡಿದ್ದಾರೆ ಎಂದರು.

ಮುಡಾ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಡಾ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶವಿದೆ. ಒಬ್ಬ ಹಾಲಿ ಸಿಎಂ ತನಿಖೆಗೆ ಹಾಜರಾಗುತ್ತಿರುವುದು ಇದೇ ಮೊದಲು ಎಂದರು.

Advertisement

ಬೆಳಗಾವಿಯಲ್ಲಿ ಸರ್ಕಾರಿ ನೌಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಆಪ್ತ ಸಹಾಯಕನ ವಿರುದ್ಧ ಡೆತ್ ನೋಟ್ ಬರೆದಿಟ್ಟು ಸಾವಿಗೀಡಾಗಿರುವ ಪ್ರಕರಣದ ಕುರಿತು ತನಿಖೆಯಾಗಲಿ. ಸರ್ಕಾರಿ ನೌಕರರು ರಾಜಕೀಯ ಒತ್ತಡದಿಂದ ರೋಷಿಹೋಗಿದ್ದಾರೆ. ಶಿಗ್ಗಾವಿಯಲ್ಲಿಯೂ ಸರ್ಕಾರಿ ನೌಕರರ ಮೇಲೆ ಒತ್ತಡ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

Advertisement

Udayavani is now on Telegram. Click here to join our channel and stay updated with the latest news.

Next