ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಿಂದೆ ಆಡಳಿತ ಮಾಡಿದವರು. ಅವರ ಆಡಳಿತ ಅವಧಿಯಲ್ಲಿ ಸೂಕ್ತ ಕ್ರಮ ತೆಗೆದುಕೊಂಡಿದ್ದರೆ ಮಳೆಗೆ ಈ ಪರಿ ತೊಂದರೆ ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲ. ಯಾರು ಭ್ರಷ್ಟರು, ಯಾರು ಭ್ರಷ್ಟರಲ್ಲ ಎಂದು ಜನರಿಗೆ ತಿಳಿದಿದೆ. ಯಾರ ಕಾಲದಲ್ಲಿ ಕೆಲಸಗಳಾಗಿವೆ ಎಂದು ಜನರಿಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಳೆ ಹಾನಿ ಸಮೀಕ್ಷೆಗೆ ಬೆಂಗಳೂರು ರೌಡ್ಸ್ ಮಾಡುತ್ತಿರುವುದು ಒಳ್ಳೆಯದು. ಹಾಗಾದರೂ ಬೆಂಗಳೂರು ನೋಡಲಿ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಳಿಕ ಮಾತನಾಡಿದ ಅವರು ನಾಳೆ ಅಥವಾ ನಾಡಿದ್ದು ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮವಾಗಲಿದೆ ಎಂದರು.
Related Articles
ಇದನ್ನೂ ಓದಿ : ರಾಜ್ಯದಲ್ಲಿ 155 ಪಾಸಿಟಿವ್ ವರದಿ: ಸೋಂಕಿನ ಪಾಸಿಟಿವ್ ದರ ಶೇ.77ಕ್ಕೆ ಏರಿಕೆ