Advertisement

ಕೋವಿಡ್ ಹೊಣೆಯರಿತು ವರ್ತಿಸಿ : ಗೃಹ ಸಚಿವ ಬೊಮ್ಮಾಯಿ ಭೇಟಿ

12:59 AM Jun 10, 2020 | Hari Prasad |

ಬೆಳ್ತಂಗಡಿ: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಿದ್ದ ಲಾಕ್‌ಡೌನ್‌ ತೆರವಾಗಿದ್ದರೂ ಸೋಂಕು ಹರಡದಂತೆ ಜನರು ಜವಾಬ್ದಾರಿಯುತರಾಗಿ ವರ್ತಿಸಬೇಕು.

Advertisement

ಪ್ರತಿಯೊಂದು ವಿಚಾರದಲ್ಲೂ ಸರಕಾರವೇ ಕಡಿವಾಣ ಹಾಕುವುದು ಅಸಾಧ್ಯ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಬರುವ ಭಕ್ತರು ಸರಕಾರ ಸೂಚಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಅಂತೆಯೇ ಹೊರ ರಾಜ್ಯದಿಂದ ಸೇವಾ ಸಿಂಧು ಆ್ಯಪ್‌ ಸಹಾಯದಿಂದ ರಾಜ್ಯಕ್ಕೆ ಆಗಮಿಸುವ ಕೆಲವರು ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳುವ ಸಲುವಾಗಿ, ಆ್ಯಪ್‌ನಲ್ಲಿ ಸೂಚಿಸಿದ ಸ್ಥಳಕ್ಕೆ ತೆರಳದೆ ದಾರಿ ಮಧ್ಯದಲ್ಲೇ ಇಳಿದು ತೆರಳುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರನ್ನು ಹುಡುಕುವ ಕೆಲಸ ಸರಕಾರದ್ದಲ್ಲ. ತಾವಾಗಿಯೇ ಕ್ವಾರಂಟೈನ್‌ಗೆ ಒಳಗಾಗಬೇಕಾಗಿರುವುದು ಅವರ ಕರ್ತವ್ಯ ಎಂದರು.

Advertisement

ರಾಜ್ಯದಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದು ಸುಭಿಕ್ಷೆ ನೆಲೆಸಲಿ ಎಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು. ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಶಾಸಕ ಹರೀಶ್‌ ಪೂಂಜ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಶಿವಪ್ರಸಾದ್‌ ಅಜಿಲ, ವೃತ್ತ ನಿರೀಕ್ಷಕ ಸಂದೇಶ್‌ ಪಿ.ಜಿ., ಬಿಜೆಪಿ ಮಂಡಲದ ಕಾರ್ಯದರ್ಶಿಗಳಾದ ಶ್ರೀನಿವಾಸ್‌ ರಾವ್‌, ಸುಬ್ರಮಣ್ಯ ಗೌಡ ಕೈಕುರೆ, ಧರ್ಮಸ್ಥಳ ದೇವಳ ವ್ಯವಸ್ಥಾಪಕ ಪಾರ್ಶ್ವನಾಥ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next