ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ವಾಕ್ಸಮರ ಆರಂಭವಾಗಿದೆ.
ನಮ್ಮ ಶಾಸಕರಿಗೆ ಡಿ.ಕೆ. ಶಿವಕುಮಾರ್ ಕರೆ ಮಾಡಿ, ತಮ್ಮ ಕಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ನೇರ ಆರೋಪ ಮಾಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷರು, ಅವರೇ (ಬಿಜೆಪಿ ಶಾಸಕರೇ) ನಮ್ಮನ್ನು ಹುಡುಕಿಕೊಂಡು ಬರುತ್ತಿದ್ದಾರೆ. ಅವರಿಗೆ ಅವಕಾಶ ಕಲ್ಪಿಸಲು ಆಗುತ್ತಿಲ್ಲ ಅಂತ ಸುಮ್ಮನಿದ್ದೇವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾ ಡಿದ ಬೊಮ್ಮಾಯಿ, ಡಿ.ಕೆ. ಶಿವಕುಮಾರ್ ಟಿಕೆಟ್ ಕೊಡುವ ಭರವಸೆ ನೀಡಿ ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ಆದರೆ ಪಕ್ಷದಲ್ಲಿ ಯಾರೂ ವಲಸಿಗರಲ್ಲ; ಎಲ್ಲರೂ ನಮ್ಮ ವರೇ. ಯಾವುದೇ ಶಾಸಕರು ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್ ವಿರುದ್ಧ ಹಲವಾರು ಪ್ರಕರಣಗಳನ್ನೂ ದಾಖಲಿಸಿದ್ದೇವೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆಶಿ., ಯಾರು ಯಾವ ಶಾಸಕರನ್ನು ಕರೆದು ಕೊಂಡು ಹೋಗಿ ಸರಕಾರ ರಚಿಸಿ ದರು? ಬಿಜೆಪಿಯವರಿಗೆ ಬಹುಮತ ಬಂದಿತ್ತಾ? ನಮ್ಮ ಶಾಸಕರೇ ಬಿಜೆಪಿಗೆ ಹೋಗಿದ್ದು. ಈಗ ಬಿಜೆಪಿಯಿಂದ ಅವರಾಗಿಯೇ ಬರುತ್ತಿದ್ದಾರೆ. ಆದರೆ ನಮ್ಮಲ್ಲಿ ಟಿಕೆಟ್ ನೀಡದಷ್ಟು “ರಶ್’ ಇದೆ. ಅಷ್ಟಕ್ಕೂ ಸಿಎಂ ಯಾವ ಪಕ್ಷದಲ್ಲಿ ಇದ್ದವರು ಎಂದು ಪ್ರಶ್ನಿಸಿದರು.
ಸಾಕಷ್ಟು ಶಾಸಕರು ಸಂಪರ್ಕದಲ್ಲಿ ದ್ದಾರೆ. ನಾನು ಅವರ ಹೆಸರು ಹೇಳಲು ಸಿದ್ಧನಿಲ್ಲ. ಅವರಿಗೆ ನಾನು ತೊಂದರೆ ಮಾಡುವುದಿಲ್ಲ ಎಂದೂ ಹೇಳಿದರು.