Advertisement

ನೂತನ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಇತಿಹಾಸ ಹೀಗಿದೆ

08:05 PM Jul 27, 2021 | Team Udayavani |

ಲಿಂಗಾಯತ ಸಮುದಾಯಕ್ಕೆ ಮತ್ತೊಮ್ಮೆ ಒಲಿದ ‘ಸಿಎಂ’ ಪಟ್ಟ: ಬಸವರಾಜ ಬೊಮ್ಮಾಯಿ  ನೂತನ ಮುಖ್ಯಮಂತ್ರಿ

Advertisement

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪನವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎರಡು ದಿನಗಳ ಕಸರತ್ತಿನ ಬಳಿಕ ಬಿಜೆಪಿ ವರಿಷ್ಠರು ಕೊನೆಗೂ ನೂತನ ಸಿಎಂ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕವಾಗಿದ್ದಾರೆ.

ಇಂದು ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಹೆಸರು ಅಂತಿಮಗೊಳಿಸಲಾಯಿತು. ಬಳಿಕ ನೂತನ ಸಿಎಂ ಹೆಸರನ್ನು ಯಡಿಯೂರಪ್ಪನವರು ಅಧಿಕೃತವಾಗಿ ಘೋಷಣೆ ಮಾಡಿದರು.

ಬೊಮ್ಮಾಯಿ ರಾಜಕೀಯ ನೋಟ :

61 ವರ್ಷದ ಬಸವರಾಜ ಬೊಮ್ಮಾಯಿ ಯವರು ಜನಿಸಿದ್ದು ಹುಬ್ಬಳ್ಳಿಯಲ್ಲಿ . ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಇವರ ತಂದೆ ಎಸ್‌ ಆರ್ ಬೊಮ್ಮಾಯಿ 1988ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಮೆಕ್ಯಾನಿಕ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರುವ ಬಸವರಾಜ ಬೊಮ್ಮಾಯಿ ಜೆಡಿಎಸ್ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು.

Advertisement

1998 ಮತ್ತು 2004ರಲ್ಲಿ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಬೊಮ್ಮಾಯಿ 2008ರಲ್ಲಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅದೇ ವರ್ಷ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶ ಪಡೆದಿದ್ದರು.

2008ರಿಂದ 2013ರವರೆಗೆ ಬಿ ಎಸ್ ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ನೇತೃತ್ವದ ಸರ್ಕಾರಗಳಲ್ಲಿ ನೀರಾವರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಬಸವರಾಜ ಬೊಮ್ಮಾಯಿ, ನಂತರ 2019ರ ಬಿಎನ್ ವೈ ಸರ್ಕಾರದಲ್ಲಿ ಗ್ರಹ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next