Advertisement

Breaking news : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

08:05 PM Jul 27, 2021 | Team Udayavani |

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪನವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎರಡು ದಿನಗಳ ಕಸರತ್ತಿನ ಬಳಿಕ ಬಿಜೆಪಿ ವರಿಷ್ಠರು ಕೊನೆಗೂ ನೂತನ ಸಿಎಂ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕವಾಗಿದ್ದಾರೆ.

Advertisement

ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ಕೆಲವು ಚರ್ಚೆಗಳ ಬಳಿಕ ಇಂದು ನೂತನ ಸಿಎಂ ಆಯ್ಕೆಯಾಗಿದೆ.

ದೆಹಲಿಯಲ್ಲಿ ವರಿಷ್ಠರ ಸಭೆಯ ಬಳಿಕ, ವೀಕ್ಷಕರಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸಿದ್ದರು. ದೆಹಲಿಯಿಂದ ನೇರ ಕಾವೇರಿ ನಿವಾಸಕ್ಕೆ ಆಗಮಿಸಿದ್ದ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬಳಿಕ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next