Advertisement
ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೇರುವ ಸಂದರ್ಭದಲ್ಲಿ ಮತ್ತೆ ಸಭಾಪತಿ ಮಾಡುವ ಷರತ್ತಿನೊಂದಿಗೆ ಬಸವರಾಜ ಹೊರಟ್ಟಿ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಕಾರಣಕ್ಕಾಗಿ ಮತ್ತೆ ಅವರನ್ನು ಸಭಾಪತಿ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದೇ ವಾರದಲ್ಲಿ ಸಭಾಪತಿ ಚುನಾವಣೆ ನಡೆಸಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಇದೇ ವೇಳೆ, ಉಪ ಸಭಾಪತಿ ಆಯ್ಕೆ ಕುರಿತಂತೆಯೂ ಚರ್ಚೆ ನಡೆಸಲಾಗಿದೆ ಎನ್ನಲಾಗಿದ್ದು, ಬಹುತೇಕ ಎಂ.ಕೆ. ಪ್ರಾಣೇಶ್ ಅವರೇ ಉಪ ಸಭಾಪತಿಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಸದನದಲ್ಲಿ ಕಾಂಗ್ರೆಸ್ ಮಾಡುವ ಆರೋಪಗಳಿಗೆ ಕೌಂಟರ್ ಕೊಡುವ ಬಗ್ಗೆಯೂ ಸಭೆಯಲ್ಲಿ ಸದಸ್ಯರಿಗೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Related Articles
Advertisement