Advertisement
ಶಿಮ್ಲಾದಲ್ಲಿ ನಡೆದ ಎರಡು ದಿನಗಳ 82ನೇ ಅಖೀಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಸಮ್ಮೇಳನದ ನಿರ್ಣಯ ಕುರಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ವಿಧಾನ ಮಂಡಲದ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ನೀಡುವ ಕುರಿತು ಸಮ್ಮೇಳನ ಪೂರಕ ನಿರ್ಣಯ ಸ್ವೀಕರಿಸಿ, ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕಸಭಾಧ್ಯಕ್ಷರು ನಿರ್ಣಯ ಅಂಗೀಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ವಿಧಾನ ಮಂಡಲದ ದೈನಂದಿನ ಕಾರ್ಯಚಟುವಟಿಕೆ ಹಾಗೂ ಆಡಳಿತವನ್ನು ಕಾಗದ ರಹಿತವನ್ನಾಗಿಸಲು ಇ-ವಿಧಾನ್ ತಂತ್ರಜ್ಞಾನವನ್ನು ಕೂಡ ಅಳವಡಿಸಿಕೊಳ್ಳುವುದು ಪ್ರಸ್ತುತ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಭೆ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಿತು.
Related Articles
Advertisement
ಸಭಾಪತಿಗಳ ಮನವಿಗೆ ಸಹಮತ ವ್ಯಕ್ತಪಡಿಸಿದ ಓಂ ಬಿರ್ಲಾ, ದೇಶದ ಎಲ್ಲಾ ವಿಧಾನ ಮಂಡಲಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಪಾರದರ್ಶಕ ಹಾಗೂ ಸುಗಮ ಕಲಾಪಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಮಾತನಾಡಿ, ಮೊದಲ ಪೀಠಾಸೀನಾಧಿಕಾರಿಗಳ ಸಮ್ಮೇಳನ 1921ರಲ್ಲಿ ಮತ್ತು ಶತಮಾನತದ ಸಮ್ಮೇಳನ ಎರಡೂ ಕೂಡ ಹಿಮಾಚಲ ಪ್ರದೇಶದಲ್ಲಿಯೇ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.
ಇದನ್ನೂ ಓದಿ : ಭಾರಿ ಮಳೆ ಸಾಧ್ಯತೆ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್, ಎರಡು ದಿನಗಳ ಸಮ್ಮೇಳನ ಫಲಪ್ರದವಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಮಾಚಲ ಪ್ರದೇಶದ ವಿಧಾನಸಭಾ ಸ್ಪೀಕರ್ ವಿಪಿನ್ ಸಿಂಗ್ ಪರಮಾರ್ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಾಲ್ಗೊಂಡಿದ್ದರು.