Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ. ಇದಲ್ಲದೆ ಬಸವರಾಜ ಪಥ ಪುಸ್ತಕವನ್ನು ಪ್ರಕಟಿಸಿರುವ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘಕ್ಕೆ ನೋಟಿಸ್ ನೀಡಲಾಗಿದ್ದು, ಈ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಪ್ರಥಮ ವರದಿ ಸಲ್ಲಿಸಲಾಗಿದೆ ಎಂದರು.
ಧಾರವಾಡ: ಸಾಂವಿಧಾನಿಕ ಪೀಠದ ಚಿತ್ರವನ್ನು ದುರ್ಬಳಕೆ ಮಾಡಿದ್ದಾರೆ ಎಂಬುದಾಗಿ ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿದ್ದು, ಆದರೆ ಈ ಬಗ್ಗೆ ನನಗೆ ಚುನಾವಣ ಆಯೋಗದಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.