Advertisement

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಸವರಾಜ ಹೊರಟ್ಟಿಗೆ ನೋಟಿಸ್‌

12:44 AM Jun 12, 2022 | Team Udayavani |

ಬೆಳಗಾವಿ: ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಬೆಂಬಲಿಗರು “ಬಸವರಾಜ ಪಥ ಮತ್ತು ಸಂಘರ್ಷ; ಹೋರಾಟ-ಸಾಧನೆ’ ಪುಸ್ತಕಗಳ ಮುಖ ಪುಟದ ಮೇಲೆ ರಾಷ್ಟ್ರೀಯ, ರಾಜ್ಯ ಲಾಂಛನ ಮತ್ತು ವಿಧಾನ ಪರಿಷತ್‌ ಸಭಾಪತಿ ಪೀಠ ಮುದ್ರಿಸಿ ಸ್ವಂತ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ದೂರು ದಾಖಲಾಗಿದೆ ಎಂದು ಚುನಾ ವಣಾಧಿಕಾರಿ ಆಮ್ಲನ್‌ ಆದಿತ್ಯ ಬಿಸ್ವಾಸ್‌ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್‌ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ನೋಟಿಸ್‌ ನೀಡಲಾಗಿದೆ. ಇದಲ್ಲದೆ ಬಸವರಾಜ ಪಥ ಪುಸ್ತಕವನ್ನು ಪ್ರಕಟಿಸಿರುವ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘಕ್ಕೆ ನೋಟಿಸ್‌ ನೀಡಲಾಗಿದ್ದು, ಈ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಪ್ರಥಮ ವರದಿ ಸಲ್ಲಿಸಲಾಗಿದೆ ಎಂದರು.

ಜತೆಗೆ, ವಾಯವ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಭಾಷ ರಂಗಪ್ಪ ಕೊಟೆಕಲ್‌ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಕರೆ ಬಂದಿದ್ದು ಇದರ ದೂರು ಸ್ವೀಕರಿಸಲಾಗಿದೆ ಎಂದು ಹೇಳಿದರು.

ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಹೊರಟ್ಟಿ
ಧಾರವಾಡ: ಸಾಂವಿಧಾನಿಕ ಪೀಠದ ಚಿತ್ರವನ್ನು ದುರ್ಬಳಕೆ ಮಾಡಿದ್ದಾರೆ ಎಂಬುದಾಗಿ ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿದ್ದು, ಆದರೆ ಈ ಬಗ್ಗೆ ನನಗೆ ಚುನಾವಣ ಆಯೋಗದಿಂದ ಯಾವುದೇ ನೋಟಿಸ್‌ ಬಂದಿಲ್ಲ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next