Advertisement

ಬಸವರಾಜ್‌ ಹೊರಟ್ಟಿ ಸಮಿತಿ ವರದಿ ಸಲ್ಲಿಕೆ

06:25 AM Jan 25, 2018 | Team Udayavani |

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅನುದಾನರಹಿತ ಸೇವೆಯನ್ನು ಪರಿಗಣಿಸಿ ವೇತನ ಬಡ್ತಿ ಮತ್ತು ಪಿಂಚಣಿ ಸೇವಾ ಸೌಲಭ್ಯ ನೀಡಲು (ಕಾಲ್ಪನಿಕ ವೇತನ) ಒಟ್ಟು 395 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ವಿಧಾನಪರಿಷತ್ತಿನ ವಿಶೇಷ ಸದನ ಸಮಿತಿ ಶಿಫಾರಸು ಮಾಡಿದೆ.

Advertisement

ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಅಧ್ಯಕ್ಷತೆಯ ವಿಶೇಷ ಸದನ ಸಮಿತಿಯ ಸದಸ್ಯರು ಬುಧವಾರ ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್‌. ಶಂಕರಮೂರ್ತಿಯವರನ್ನು ವಿಧಾನಸೌಧದ ಅವರ ಕಚೇರಿಯಲ್ಲಿ ಭೇಟಿಯಾಗಿ ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯ ಎಸ್‌.ವಿ. ಸಂಕನೂರು ಹಾಗೂ ಜೆಡಿಎಸ್‌ ಸದಸ್ಯ ರಮೇಶ್‌ಬಾಬು ಉಪಸ್ಥಿತರಿದ್ದರು.

ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್‌ ಹೊರಟ್ಟಿ, ವಾಸ್ತವ ಅಂಶಗಳನ್ನು ಪರಾಮರ್ಶಿಸಿ ವರದಿ ನೀಡಲಾಗಿದ್ದು, 395 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ. ಇದರಿಂದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 25 ಸಾವಿರ ಸಿಬ್ಬಂದಿಗೆ ಅನುಕೂಲವಾಗಲಿದೆ. ಮುಂದಿನ ಅಧಿವೇಶನದಲ್ಲಿ ವರದಿ ಮಂಡಿಸಿ, ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next