ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನ ನೂತನ ಸಭಾಪತಿಯಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು.
ಇಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು.
ಇದನ್ನೂ ಓದಿ:ಗೋಹತ್ಯೆ ನಿಷೇಧ ವಿಧೇಯಕ ಮತ್ತೆ ಮತಕ್ಕೆ ಹಾಕಿ: ಸಿಎಂ ಇಬ್ರಾಹಿಂ ಆಗ್ರಹ
ಆದರೆ ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಪರಿಷತ್ ನಲ್ಲಿ ಅಂಗೀಕಾರ ವಿಚಾರವಾಗಿ ಕಾಂಗ್ರೆಸ್ ಇಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದೆ. ಸಭಾಪತಿ ಚುನಾವಣೆಗೆ ಪ್ರಸ್ತಾವನೆ ಸಲ್ಲಿಸುವಾಗ ಕಾಂಗ್ರೆಸ್ ನಿಂದ ಸಲ್ಲಿಕೆಯಾಗಿಲ್ಲ. ಹೀಗಾಗಿ ಬಸವರಾಜ್ ಹೊರಟ್ಟಿ ಅವರೇ ಮುಂದಿನ ಸಭಾಪತಿ ಎಂದು ಘೋಷಿಸಲಾಯಿತು.
ಇದನ್ನೂ ಓದಿ: ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಮಾರ್ಚ್ ಮೊದಲ ವಾರ ರಾಜ್ಯ ಬಜೆಟ್ ಮಂಡನೆ: ಸಿಎಂ