Advertisement

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದ ಸಭಾಪತಿ ಬಸವರಾಜ್ ಹೊರಟ್ಟಿ

10:33 AM May 03, 2022 | Team Udayavani |

ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Advertisement

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ‌‌ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ:ಕೈಗೆ ಬಂದ ತುತ್ತು ಬಾಯಿಗಿಲ್ಲ ! ನೇಮಕಾತಿ ಅಕ್ರಮ: ವರದಿ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌

ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕತ್ವ ಬಲಪಡಿಸಲು ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಪಕ್ಷಕ್ಕೆ ಕರೆತರಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next