Advertisement

ಬಸವರಾಜ ಹೊರಟ್ಟಿ ಅಸಮಾಧಾನ

07:00 AM Jun 12, 2018 | Team Udayavani |

ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿಯ ಲಿಂಗಾಯತ ಶಾಸಕರಿಗೆ ಹೆಚ್ಚಿನ ಸಚಿವ ಸ್ಥಾನ ಸಿಗದೇ ಇರುವ ಅಸಮಾಧಾನವಿದ್ದು, ವೈಯಕ್ತಿಕವಾಗಿ ನನಗೂ ಅಸಮಾಧಾನವಿದೆ ಎಂದು ವಿಧಾನ ಪರಿಷತ್‌ ಸದಸ್ಯ
ಬಸವರಾಜ ಹೊರಟ್ಟಿ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಸಚಿವನಾಗಬೇಕೆಂಬ ಆಕಾಂಕ್ಷೆ ನನಗಿತ್ತು.

ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ನಾನೇ ಹಿರಿಯ ಸದಸ್ಯ. ಆದರೆ ಕೊನೆಯ ಗಳಿಗೆಯಲ್ಲಿ ನನ್ನ
ಹೆಸರು ಕೈ ಬಿಟ್ಟಿರುವುದು ಬೇಸರ ತಂದಿದೆ ಎಂದು ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡಿದಾಗ ಕೆಲ ಸ್ವಾಮೀಜಿಗಳಿಂದ ಅಪಪ್ರಚಾರ ನಡೆಯಿತು. ಈ ಹೋರಾಟದಲ್ಲಿ ಪಾಲ್ಗೊಂಡವರನ್ನು ಸಚಿವ ಸಂಪುಟದಿಂದ ಹೊರಗಿಡಲಾಗಿದೆ. ನನ್ನನ್ನೂ ಸೇರಿ ಎಂ.ಬಿ. ಪಾಟೀಲ,
ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಅವರನ್ನು ಹೊರಗಿಟ್ಟಿದ್ದಾರೆ ಎಂದರು. 

ನಾವು ಎಂದಿಗೂ ಜಾತಿ ರಾಜಕಾರಣ ಮಾಡಿದವರಲ್ಲ. ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಆಗಿದೆ ಎಂಬ ಕಾರಣಕ್ಕೆ ಹೋರಾಟ ನಡೆಸಿದ್ದೇವೆ. ನ್ಯಾಯಕ್ಕಾಗಿ ಹೋರಾಟ ಮಾಡಿದ್ದೇವೆ. ಇದು ತಪ್ಪು ಎಂದಾದರೆ ಏನೂ
ಮಾಡೋಕೆ ಆಗುವುದಿಲ್ಲ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next