Advertisement

ಬೆಳಗಾವಿ ಚಳಿಗಾಲ ಅಧಿವೇಶನ ಕಲಾಪ ನೇರಪ್ರಸಾರ: ಸಭಾಪತಿ ಬಸವರಾಜ ಹೊರಟ್ಟಿ

03:31 PM Nov 08, 2021 | Team Udayavani |

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದ ಕಲಾಪವನ್ನು ಸಾರ್ವಜನಿಕರೂ ವೀಕ್ಷಿಸಲು ಅನುಕೂಲವಾಗುವಂತೆ ಮೊದಲ ಬಾರಿ ವೆಬ್ ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ‌ ವ್ಯವಸ್ಥೆ ಮಾಡಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

Advertisement

ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ವೆಬ್ ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ ಮಾಡುವ ಕುರಿತು ಸೋಮವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ವೆಬ್ ಕ್ಯಾಸ್ಟಿಂಗ್ ಗೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಯೊಂದು ಇಲಾಖೆಯ ಕಚೇರಿಯಲ್ಲಿ ಇ-ಆಫೀಸ್ ಬಳಕೆ ಮಾಡುತ್ತಿರುವುದರಿಂದ ಇಂಟರ್ನೆಟ್ ಸೇರಿದಂತೆ ಎಲ್ಲ ಸಮರ್ಪಕ ಸೌಲಭ್ಯಗಳನ್ನು ಒಂದು ವಾರದೊಳಗೆ ಒದಗಿಸುವಂತೆ ತಿಳಿಸಿದರು.

ಇದನ್ನೂ ಓದಿ:ಪುನೀತ್ ಬದಲು ರಾಜಕಾರಣಿಗಳನ್ನು ಸಾಯಿಸಬಹುದಿತ್ತು : ಹಾಸನಾಂಬೆಗೆ ಭಕ್ತನ ಪತ್ರ

Advertisement

ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮಾಡಲು ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರು ವಿಧಾನಮಂಡಲ ಅಧಿವೇಶನದ ಕಲಾಪವನ್ನು ನೇರವಾಗಿ ವೀಕ್ಷಿಸಲು ಅನುಕೂಲ ಕಲ್ಪಿಸಲು ಏನೆಲ್ಲಾ ಸೌಕರ್ಯಗಳನ್ನು ಕಲ್ಪಿಸಬೇಕಿದೆ. ಅವೆಲ್ಲವನ್ನೂ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಧಿವೇಶನ ಎಲ್ಲ ರೀತಿಯಿಂದ ಸುಗಮವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಕೆಲಸಕಾರ್ಯಗಳನ್ನು ತ್ವರಿತವಾಗಿ ಆರಂಭಿಸಬೇಕು ಎಂದರು.

ಇದಕ್ಕೂ ಮುನ್ನ ಪರಿಷತ್ತಿನ ಸಭಾಂಗಣವನ್ನು ಪರಿಶೀಲಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿಯಲ್ಲಿ ಮೊದಲ ಅಧಿವೇಶನ ಆರಂಭಗೊಂಡ ಹಿನ್ನೆಲೆಯನ್ನು ವಿವರಿಸಿದರು.

ವಿಧಾನ ಮಂಡಲದ ಕಲಾಪವನ್ನು ನೇರಪ್ರಸಾರ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರತಿಯೊಂದು ವಿಷಯವನ್ನು ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ. ಅದೇ ರೀತಿ ಡಿಸೆಂಬರ್ ನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕೂಡ ಇದೇ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಭಾಪತಿಗಳು ಹೇಳಿದರು.

ಅಧಿವೇಶನದ ಸಿದ್ಧತೆ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಂಜೀವಕುಮಾರ್ ಹುಲಕಾಯಿ, ಎನ್.ಐ.ಸಿ. ಅಧಿಕಾರಿ ಸಂಜೀವಕುಮಾರ್ ಕ್ಷೀರಸಾಗರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next