Advertisement

ಇಡೀ ದೇಶದಲ್ಲೇ ಬಸವರಾಜ ಬೊಮ್ಮಾಯಿ ಅಸಮರ್ಥ ಮುಖ್ಯಮಂತ್ರಿ: ಸುರ್ಜೇವಾಲಾ

09:22 PM Aug 16, 2022 | Team Udayavani |

ಬೆಂಗಳೂರು: ಇಡೀ ದೇಶದಲ್ಲೇ ಬಸವರಾಜ ಬೊಮ್ಮಾಯಿ ಅಸಮರ್ಥ ಮುಖ್ಯಮಂತ್ರಿ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಇಡೀ ದೇಶದಲ್ಲಿ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದರೆ ಅದು ಬಸವರಾಜ ಬೊಮ್ಮಾಯಿ ಎಂಬುದು ಸಾಬೀತಾಗಿದೆ ಎಂದು ಹೇಳಿದರು.

ಮಂಗಳೂರಿನಲ್ಲಿನ ಪ್ರಕರಣ, ಶಿವಮೊಗ್ಗದ ಬೆಳವಣಿಗೆಗೆಳು ಮುಖ್ಯಮಂತ್ರಿಗಳ ವೈಫಲ್ಯ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ. ಇದಕ್ಕೆಲ್ಲ ಕಾರಣವಾಗಿರುವ ಸಮಾಜ ಘಾತುಕ ಶಕ್ತಿಗಳಿಗೆ ಬಿಜೆಪಿಯೇ ಪ್ರೋತ್ಸಾಹ ನೀಡುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶೇ.40 ಪರ್ಸೆಂಟ್‌ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಿಡಿಗೇಡಿಗಳು, ಸಮಾಜಘಾತುಕ ಸಂಘಟನೆಗಳು ಜನರನ್ನು ಹಾಡಹಗಲೇ ಹತ್ಯೆ ಮಾಡುತ್ತಿದ್ದಾರೆ. ಬಿಜೆಪಿಯ ಕಾರ್ಯಕರ್ತರೇ ಹತ್ಯೆಯಾಗುತ್ತಿದ್ದರೂ ಈ ಸರ್ಕಾರ ವೈಮರೆತು ಕೂತಿದೆ. ಆ ಮೂಲಕ ಜನರಿಗೆ ದ್ರೋಹ ಬಗೆಯುತ್ತಿದೆ. ಸಮಾಜವನ್ನು ಒಡೆಯಲು ಬಿಜೆಪಿ ಪ್ರಾಯೋಜಿತ ಷಡ್ಯಂತ್ರಗಳ ವಿರುದ್ಧ ಹೋರಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಪಣ ತೊಟ್ಟಿದ್ದೇವೆ. ಈ ಸರ್ಕಾರವನ್ನು ಕಿತ್ತೂಗೆಯುವವರೆಗೂ ನಾವು ವಿರಮಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next