Advertisement

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೇಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

04:16 PM Oct 01, 2024 | Team Udayavani |

ಹುಬ್ಬಳ್ಳಿ: ಮುಡಾ ಸೈಟ್ ವಾಪಸ್ಸು ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

Advertisement

ಸಿಎಂ ಸಿದ್ದರಾಮಯ್ಯರ ಪತ್ನಿಯು ಮುಡಾ ಸೈಟ್ ವಾಪಸ್ಸು ಕೊಟ್ಟಿರುವ ಕುರಿತು ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕೆಲಸ ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯನವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು. ರಾಜ್ಯಪಾಲರು ಈ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ ತನಿಖೆ ನಡೆದಿದೆ. ಈಗ ವಾಪಸ್ಸು ಮಾಡಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ಸೈಟ್ ಮರಳಿಸುವ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಎಫ್ಐಆರ್ ಆದಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದೆಡೆ ಇಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಮೊದಲು ಕಾಂಗ್ರೆಸ್ ನಾಯಕರು ತಪ್ಪೇ ನಡೆದಿಲ್ಲ ಎನ್ನುತ್ತಿದ್ದರು. ಈಗ ಸೈಟ್ ಮರಳಿಸುವ ಮೂಲಕ ತಪ್ಪಾಗಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದರು.

ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ಸು ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ನೆನಪಿಸಿಕೊಳ್ಳಲಿ. ಆಗ ಯಡಿಯೂರಪ್ಪ ಸೈಟ್ ಮರಳಿಸುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಅಂತ ಹೇಳಿದ್ದರು. ಈಗ ಇದೇ ಮಾತು ಸಿದ್ದರಾಮಯ್ಯ ಅವರಿಗೂ ಅನ್ವಯವಾಗುತ್ತದೆ. ಸೈಟ್ ವಾಪಸ್ಸಿನೊಂದಿಗೆ ಅಕ್ರಮ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ. ಸೈಟ್ ಹಂಚಿಕೆ ಕಾನೂನು ಬಾಹಿರವಾಗಿದೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next