Advertisement

ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ

11:28 PM Dec 11, 2019 | Team Udayavani |

ಬೆಂಗಳೂರು: ಮಾಜಿ ಸಚಿವ ಬಸವರಾಜ ಹೊರಟ್ಟಿಯವರು ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಯವರನ್ನು ಬಸವರಾಜ ಹೊರಟ್ಟಿ ವಿಶ್ರಾಂತಿ ಕೊಠಡಿಯಲ್ಲಿ ಭೇಟಿ ಮಾಡಿ, ಚರ್ಚಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಹೊರಟ್ಟಿ, ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಯವರ ಬಳಿ ಮಾತನಾಡಲು ಬಂದಿದ್ದೆ. ಭೇಟಿ ಸಂದರ್ಭದಲ್ಲಿ ರಾಜಕೀಯ ವಿಚಾರ ಚರ್ಚೆಯಾಗಿಲ್ಲ. ಶಿಕ್ಷಕರ ಸಮಸ್ಯೆ ಕುರಿತು ಕೆಲವೊಂದು ಆದೇಶ ಹೊರಡಿಸಬೇಕಾಗಿದೆ. ಹೀಗಾಗಿ, ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next