ಧಾರವಾಡ: ಕರ್ನಾಟಕ ವಿಧಾನ ಪರಿಷತ್ ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಸಹಾಯಕ ಚುನಾವಣಾಧಿಕಾರಿ ಹಾಗೂ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರಿಗೆ ದ್ವಿಪ್ರತಿಯಲ್ಲಿ ನಾಮಪತ್ರ ಸಲ್ಲಿಸಿದ ಹೊರಟ್ಟಿ ಅವರಿಗೆ ಅವರ ಪತ್ನಿ ಹೇಮಲತಾ, ಹಾಗೂ ಹಿರಿಯ ಶಿಕ್ಷಕ ವೃಂದ ಸೂಚಕರಾಗಿ ಬೆಂಬಲ ಸೂಚಿಸಿದರು.
ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಹೊರಟ್ಟಿ ಅವರಿಗೆ ಬಿಜೆಪಿ ಇಂದೇ ಟಿಕೆಟ್ ಘೋಷಣೆ ಮಾಡಿತು.
ಇದನ್ನೂ ಓದಿ:ಪರಿಷತ್ ಅಭ್ಯರ್ಥಿ ಹೇಮಲತಾ ನಾಯಕ್ ಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ
Related Articles
ಸತತ ಏಳು ಬಾರಿ ಮೇಲ್ಮನೆ ಸದಸ್ಯರಾಗಿ ಆಯ್ಕೆಯಾದ ಹೊರಟ್ಟಿ ಅವರು ಈಗಾಗಲೇ ರಾಜಕೀಯ ದಾಖಲೆ ಮಾಡಿದ್ದು ಇದೀಗ ಮತ್ತೊಂದು ಬಾರಿ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ.