Advertisement

ಕೃಷಿ ಪತ್ರಕರ್ತ ಸಾಯಿನಾಥ್‌ಗೆ ಬಸವಶ್ರೀ ಪ್ರಶಸ್ತಿ

06:50 AM Oct 14, 2017 | |

ಬೆಂಗಳೂರು: ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಸಾಯಿನಾಥ್‌ ಆಯ್ಕೆಯಾಗಿದ್ದಾರೆ.

Advertisement

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜ ಸುಧಾರಕರಿಗೆ ಪ್ರತಿವರ್ಷ ಚಿತ್ರದುರ್ಗದ ಮುರುಘಾಮಠವು ಬಸವಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ. ಭಾರತೀಯ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಪಿ.ಸಾಯಿನಾಥ್‌ ಅವರು, 1980ರಲ್ಲಿ ಪತ್ರಿಕೋದ್ಯಮಕ್ಕೆ ಸೇರಿದ್ದರು. ತಮ್ಮ ವೃತ್ತಿಯಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ, ಗ್ರಾಮೀಣ ಭಾರತ, ಕೃಷಿ, ಹೆಣ್ಣು ಮಕ್ಕಳ ಶಿಕ್ಷಣ, ಮೂಢನಂಬಿಕೆ ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹೆಚ್ಚು ಆದ್ಯತೆ ನೀಡಿದ್ದರು.

ಪತ್ರಿಕೋದ್ಯಮದ ಜತೆಗೆ ಓರ್ವ ಅತ್ಯುತ್ತಮ ಛಾಯಾಗ್ರಾಹಕರೂ ಆಗಿರುವ ಸಾಯಿನಾಥ್‌, ಪೀಪಲ್‌ ಆರ್ಚಿವ್‌ ರೂರಲ್‌ ಇಂಡಿಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು ಗ್ರಾಮೀಣ ಜನರ ಸೇವೆಯಲ್ಲೂ ತೊಡಗಿದ್ದರು. ಅವರ ಸಮಾಜ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ರಾಮನ್‌ ಮ್ಯಾಗ್ಸೆಸೆ ಪ್ರಶಸ್ತಿ ಒಲಿದಿದೆ. ಅ.23ರಂದು ಚಿತ್ರದುರ್ಗದ ಮುರುಘಾಮಠದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ರಾಜ್ಯದಲ್ಲಿ ಪ್ರತಿಷ್ಠಿತ ಪುರಸ್ಕಾರವೆಂದೇ ಹೇಳಲಾಗುತ್ತಿರುವ ಬಸವಶ್ರೀ ಪ್ರಶಸ್ತಿಯನ್ನು ಈ ಹಿಂದೆ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌, ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಸೇರಿದಂತೆ ಹಲವರಿಗೆ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next