Advertisement

ಜಿಲ್ಲಾಡಳಿತದಿಂದ ಬಸವೇಶ್ವರ ಜಯಂತಿ

04:00 PM Apr 27, 2020 | Suhan S |

ಬಾಗಲಕೋಟೆ: ಕೋವಿಡ್‌-19 ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿದ ವತಿಯಿಂದ ವಿಶ್ವಗುರು ಬಸವಣ್ಣನವರ 887ನೇ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

Advertisement

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ರವಿವಾರ ಬಸವಣ್ಣನವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಶಿರೂರ ಉಪಸ್ಥಿತರಿದ್ದರು.

ಇದಕ್ಕೂ ಪೂರ್ವದಲ್ಲಿ ಹಳೆಯ ಬಾಗಲಕೋಟೆಯ ಬಸವೇಶ್ವರ ಸರ್ಕಲ್‌ ನಲ್ಲಿ ಇರುವ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next