ಮೈಸೂರು: ಶತಮಾನಗಳ ಹಿಂದೆಯೇ ನಾಡಿಗೆ ಸಮಾನತೆಯ ಸಂದೇಶ ಸಾರುವ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದ ವಚನಕಾರ ಬಸವಣ್ಣನವರ ಜಯಂತಿ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ನಡೆಯಿತು.
ನಗರದ ಇಟ್ಟಿಗೆಗೂಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ಮಾತನಾಡಿ, ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಿಸುವುದು ಪುಣ್ಯದ ಕೆಲಸವಾಗಿದ್ದು, ರಾಜ್ಯದ ಮಕ್ಕಳು ಸೇರಿದಂತೆ ಎಲ್ಲರಿಗೂ ಬಸವಣ್ಣನವರ ಬಗ್ಗೆ ತಿಳಿದಿದೆ. ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿರುವ ಮಹಿಳಾ ಸಮಾನತೆ ಬಸವಣ್ಣನವರು ಅನುಭವ ಮಂಟಪದಲ್ಲಿ ಜಾರಿಗೆ ತಂದಿದ್ದರು. ಬಿಜೆಪಿ ಬಸವಣ್ಣನವರ ತತ್ವಗಳನ್ನು ಪಾಲಿಸುತ್ತಾ ಬಂದಿದೆ ಎಂದರು.
ಮಾಜಿ ಸಚಿವ ಎಸ್.ಎ.ರಾಮದಾಸ್ ಮಾತನಾಡಿ, ಪ್ರಧಾನಿ ಮೋದಿ ಬಸವಣ್ಣನವರು ಹೇಳಿಕೆಯಂತೆ ಕಾಯಕವನ್ನು ನಂಬಿ ಬಂದವರು. ವಿಜಾnನ ¸ವನದ ಮೂಲಕ ಬಸವಣ್ಣರ ತತ್ವಗಳನ್ನು 23 ಭಾಷೆಗಳಲ್ಲಿ ಜನರಿಗೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಇಂದು ಜಾತಿ ವ್ಯವಸ್ಥೆ ಎಂಬುದು ರಾಜಕೀಯ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರಮುಖ ಭಾಷಣಕಾರ ಪರಮೇಶ್ವರಪ್ಪ ಮಾತನಾಡಿ, ಬಸವಣ್ಣ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರಾಗಿದ್ದು, ಅವರ ಜಯಂತಿಯನ್ನು ರಾಷ್ಟ್ರೀಯ ಪಕ್ಷವೊಂದು ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ. ಬಸವಣ್ಣರು ಕ್ರಾಂತಿ ಕಾರಿ, ಬಡವ, ದಲಿತರ ಉದ್ಧಾರಕರಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಕೊಡುಗೆ ನೀಡಿರುವ ಬಸವಣ್ಣರು ಸಮಾಜದಲ್ಲಿದ್ದ ಜಾತಿ ನಿರ್ಮೂಲನೆ, ಅಂತಜಾìತಿ ವಿವಾಹ ಹಾಗೂ ಕಾಯಕ-ದಾಸೋಹಗಳನ್ನು ಬೋಧಿಸಿದ್ದು, ಅವರ ಮಾರ್ಗವನ್ನು ಪಾಲಿಸುವುದರಿಂದ ಸಾಧನೆ ಮಾಡಬಹುದಾಗಿದೆ ಎಂದರು.
ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಸಿ.ಎಚ್.ವಿಜಯಶಂಕರ್, ಉಪ ಮೇಯರ್ ರತ್ನಾ ಲಕ್ಷ್ಮಣ್, ಪಾಲಿಕೆ ಸದಸ್ಯ ನಂದೀಶ್ ಪ್ರೀತಂ, ಮೈಸೂರು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮೈ.ಪು.ರಾಜೇಶ್, ಎಚ್.ವಿ.ರಾಜೀವ್ ಹಾಜರಿದ್ದರು.