Advertisement

ಅತ್ಯಾಚಾರ ವಿರೋಧಿಸಿದ ಬಾಸ್ಕೆಟ್‌ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು

08:03 PM Aug 18, 2022 | Team Udayavani |

ನವದೆಹಲಿ: ಬಾಸ್ಕೆಟ್‌ಬಾಲ್ ಆಟಗಾರ್ತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಕಾಮುಕರು ಆಕೆಯನ್ನು ಕ್ರೀಡಾಂಗಣದ ಮೇಲ್ಛಾವಣಿಯಿಂದ ತಳ್ಳಿ ಅಟ್ಟಹಾಸ ಮೆರೆದ ಆಘಾತಕಾರಿ ಘಟನೆ ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಬಾಸ್ಕೆಟ್‌ಬಾಲ್ ಆಟಗಾರ್ತಿ ಮೇಲ್ಛಾವಣಿಯಿಂದ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಲೂಧಿಯಾನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಪ್ರಕಾರ, ಆಟಗಾರ್ತಿ ಮೋಗಾದ ಕ್ರೀಡಾಂಗಣಕ್ಕೆ ಅಭ್ಯಾಸಕ್ಕೆ ತೆರಳಿದ್ದರು. ದೂರುದಾರರ ಪ್ರಕಾರ ಮೂವರು ಆರೋಪಿಗಳಲ್ಲಿ ಒಬ್ಬನಾದ ಜತಿನ್ ಕಾಂಡ ಎಂಬಾತ ಕ್ರೀಡಾಂಗಣದಲ್ಲಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ.  ಆಕೆ ಪ್ರತಿರೋಧಿಸಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಆರೋಪಿಯು ಅವಳನ್ನು ಸುಮಾರು 25 ಅಡಿ ಎತ್ತರದಿಂದ ತಳ್ಳಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳ್ತಂಗಡಿ: ಗೋ ಅಕ್ರಮ ಸಾಗಾಟ; 2 ವಾಹನ ಸಹಿತ ಮೂವರ ವಶ

ಜತಿನ್ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಐಪಿಸಿ 307 (ಕೊಲೆ ಯತ್ನ) ಮತ್ತು 376 (ಅತ್ಯಾಚಾರ) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಮೋಗಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಖುರಾನಾ ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next